ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಕರ್ನಾಟಕ

ದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು

ವೇರಿ ನೀರು ಹರಿಸದ ಕಾರಣ ಬೆಳೆ ಹಾನಿಯಾಗಿದ್ದು, ತುರ್ತು ವಿಚಾರಣೆ ನಡೆಸುವಂತೆ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದೆ.

ಕಾವೇರಿ ನೀರು ವಿವಾದ: ಮತ್ತೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು‌
ಹಂಚಿಕೊಳ್ಳಿ:

ಕಾವೇರಿ ನೀರು ಹಂಚಿಕೆ ವಿಚಾರವಾಗಿ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ತುರ್ತು ಮನವಿ ಸಲ್ಲಿಸಿದೆ. ಕರ್ನಾಟಕವು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶದಂತೆ ಅಕ್ಟೋಬರ್ 23ರಿಂದ ಪ್ರತಿದಿನ 3,000 ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಿಲ್ಲ ಎಂದು ತಮಿಳುನಾಡು ಆರೋಪಿಸಿದೆ. ಇದರಿಂದ ರಾಜ್ಯದ ಸುಮಾರು 4 ಲಕ್ಷ ಹೆಕ್ಟೇರ್ ಕೃಷಿ ಭೂಮಿಯಲ್ಲಿ ಬೆಳೆಗಳು ಹಾನಿಗೊಳಗಾಗಿವೆ ಎಂದು ವಕೀಲರು ನ್ಯಾಯಾಲಯದ ಗಮನಕ್ಕೆ ತಂದಿದ್ದಾರೆ. ನವೆಂಬರ್ 6ರಂದು ನಡೆಯಲಿರುವ ಪ್ರಾಧಿಕಾರದ ಸಭೆಯ ಹಿನ್ನೆಲೆಯಲ್ಲಿ ಈ ವಿಷಯವನ್ನು ತ್ವರಿತವಾಗಿ ವಿಚಾರಣೆ ನಡೆಸುವಂತೆ ಕೋರಲಾಗಿದ್ದು, ಮುಖ್ಯ ನ್ಯಾಯಮೂರ್ತಿಗಳ ಪೀಠವು ಈ ಬಗ್ಗೆ ಪರಿಶೀಲನೆ ನಡೆಸುವುದಾಗಿ ತಿಳಿಸಿದೆ.

ಹಂಚಿಕೊಳ್ಳಿ: