ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಕರ್ನಾಟಕ

ದೆಹಲಿ: ಪ್ರಜಾಪ್ರಭುತ್ವ ರಕ್ಷಣೆಗೆ ಮೋದಿ ಅಧಿಕಾರದಿಂದ ಕೆಳಗಿಳಿಯಲಿ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: 'ಪ್ರಜಾಪ್ರಭುತ್ವವನ್ನು ಉಳಿಸಲು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಧಿಕಾರದಿಂದ ಕೆಳಗಿಳಿಸುವುದು ಅತ್ಯಗತ್ಯ’ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.ಮತಗಳ್ಳತನದ ವಿರುದ್ಧ ದೆಹಲಿಯ ರಾ...

ಮೋದಿ ತೊಲಗಿಸಿ, ಪ್ರಜಾಪ್ರಭುತ್ವ ಉಳಿಸಿ: ಮಲ್ಲಿಕಾರ್ಜುನ ಖರ್ಗೆ
ಹಂಚಿಕೊಳ್ಳಿ:

ನವದೆಹಲಿಯ ರಾಮಲೀಲಾ ಮೈದಾನದಲ್ಲಿ ಇಂಡಿ ಮೈತ್ರಿಕೂಟ ಆಯೋಜಿಸಿದ್ದ ಸಮಾವೇಶದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ರಕ್ಷಿಸುತ್ತಿದ್ದಾರೆ ಎಂದು ಅವರು ಆರೋಪಿಸಿದರು. ಮಹಾರಾಷ್ಟ್ರ, ಬಿಹಾರ ಮತ್ತು ಉತ್ತರ ಪ್ರದೇಶದಲ್ಲಿ ಬಿಜೆಪಿ ಮತಗಳ್ಳತನದ ಮೂಲಕ ಅಧಿಕಾರ ಹಿಡಿದಿದೆ ಎಂದು ಟೀಕಿಸಿದ ಖರ್ಗೆ, ಪ್ರಜಾಪ್ರಭುತ್ವವನ್ನು ಕಾಪಾಡಲು ಮೋದಿಯನ್ನು ಅಧಿಕಾರದಿಂದ ಕೆಳಗಿಳಿಸುವುದು ಅನಿವಾರ್ಯ ಎಂದರು. ಈ ಸಮಾವೇಶದಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಅಖಿಲೇಶ್ ಯಾದವ್ ಮತ್ತು ಮಮತಾ ಬ್ಯಾನರ್ಜಿ ಸೇರಿದಂತೆ ಹಲವು ವಿಪಕ್ಷ ನಾಯಕರು ಉಪಸ್ಥಿತರಿದ್ದರು.

ಹಂಚಿಕೊಳ್ಳಿ: