ದೆಹಲಿ ವಿಮಾನ ನಿಲ್ದಾಣದಲ್ಲಿ ಪಂಜಾಬ್ ಸಿಎಂ ಭಗವಂತ್ ಮಾನ್ ತಡೆ, 50 ಸಾವಿರ ದಂಡ
ಚಂಡೀಗಢ: ಪ್ಯಾರಿಸ್‌ನಿಂದ ವಾಪಸಾದ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ಮೂರು ಗಂಟೆಗಳ ಕಾಲ ತಡೆಹಿಡಿಯಲಾಗಿದೆ ಮತ್ತು 50 ಸಾವಿರ ದಂಡ ವಿಧಿಸಲಾಗಿದೆ ಎಂದು ಆಮ್ ಆದ್ಮಿ ಪಕ್ಷ (ಎಎಪಿ...

ಪ್ಯಾರಿಸ್ ಪ್ರವಾಸ ಮುಗಿಸಿ ದೆಹಲಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರನ್ನು ಮೂರು ಗಂಟೆಗಳ ಕಾಲ ತಡೆಹಿಡಿಯಲಾಗಿದೆ ಎಂದು ಆಮ್ ಆದ್ಮಿ ಪಕ್ಷ ದೂರಿದೆ. ಲಗೇಜ್ ಪರಿಶೀಲನೆ ನೆಪದಲ್ಲಿ ಅಧಿಕಾರಿಗಳು ಈ ಕ್ರಮ ಕೈಗೊಂಡಿದ್ದು, ನಂತರ 50 ಸಾವಿರ ರೂಪಾಯಿ ದಂಡ ವಿಧಿಸಿದ್ದಾರೆ. ಮೇಲ್ಮಟ್ಟದ ಒತ್ತಡದ ಕಾರಣದಿಂದಲೇ ಈ ಘಟನೆ ನಡೆದಿದೆ ಎಂದು ಎಎಪಿ ಮಾಧ್ಯಮ ಉಸ್ತುವಾರಿ ಬಲ್ತೇಜ್ ಪನ್ನು ಆರೋಪಿಸಿದ್ದಾರೆ. ಹೈಕೋರ್ಟ್ ಅನುಮತಿಯೊಂದಿಗೆ ವಿದೇಶ ಪ್ರವಾಸ ಕೈಗೊಂಡಿದ್ದ ಸಿಎಂ ಅವರಿಗೆ ಶಿಷ್ಟಾಚಾರದ ಉಲ್ಲಂಘನೆಯಾಗಿದೆ ಎಂದು ಪಕ್ಷವು ಅಸಮಾಧಾನ ವ್ಯಕ್ತಪಡಿಸಿದೆ.




