ಧರ್ಮಸ್ಥಳ ಸೌಜನ್ಯ ಪ್ರಕರಣ: ಎಸ್‌ಐಟಿ ಮುಖ್ಯಸ್ಥ ಹುದ್ದೆಯಿಂದ ಕೆಳಗಿಳಿಯಲು ಶಶಿಕುಮಾರ್ ಮನವಿ
ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ವಿಶೇಷ ತನಿಖಾ ತಂಡದ ಮುಖ್ಯಸ್ಥ ಸ್ಥಾನದಿಂದ ತಮ್ಮನ್ನು ಮುಕ್ತಗೊಳಿಸುವಂತೆ ಹಿರಿಯ ಐಪಿಎಸ್ ಅಧಿಕಾರಿ, ಐಜಿಪಿ ಶಶಿಕುಮಾರ್ ಅವರು ರಾಜ್ಯ ಪೊಲೀಸ್ ಮಹಾನಿರ್ದೇಶಕ ಎಂ.ಎ....

ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ ಮುಖ್ಯಸ್ಥರಾದ ಐಜಿಪಿ ಶಶಿಕುಮಾರ್ ಅವರು ತಮ್ಮ ಸ್ಥಾನದಿಂದ ಬಿಡುಗಡೆ ಕೋರಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಎಂ.ಎ. ಸಲೀಂ ಅವರಿಗೆ ಪತ್ರ ಬರೆದಿದ್ದಾರೆ. ಈ ಹಿಂದೆ ಮಂಗಳೂರು ಕಮಿಷನರ್ ಆಗಿದ್ದ ಶಶಿಕುಮಾರ್ ಅವರ ನೇಮಕದ ವಿರುದ್ಧ ಸೌಜನ್ಯ ಅವರ ಕುಟುಂಬಸ್ಥರು ಹಾಗೂ ಹೋರಾಟಗಾರರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ಈ ತನಿಖೆಯು ಪಾರದರ್ಶಕವಾಗಿ ನಡೆಯಬೇಕು ಎಂಬ ಉದ್ದೇಶದಿಂದ ಶಶಿಕುಮಾರ್ ಸ್ವಯಂಪ್ರೇರಿತರಾಗಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.




