ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಕರ್ನಾಟಕ

ದೊಡ್ಡಬಳ್ಳಾಪುರ ತಾಲೂಕಿನ ತಿಮ್ಮೋಜನಹಳ್ಳಿಯಲ್ಲಿ 3.0 ತೀವ್ರತೆಯ ಭೂಕಂಪನ ದಾಖಲು

ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ದೊಡ್ಡಬಳ್ಳಾಪುರ (Doddaballapura) ತಾಲೂಕಿನ ತೂಬಗೆರೆ ಸಮೀಪ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 3.0 ತೀವ್ರತೆ ದಾಖಲಾಗಿದೆ. ಇಂದು ಬೆಳಗ್ಗೆ 9 ಗಂಟೆ 1 ನಿಮಿಷ 59 ಸೆಕೆಂಡ್‌...

· ಬೆಂಗಳೂರು ಗ್ರಾಮಾಂತರ
ದೊಡ್ಡಬಳ್ಳಾಪುರದಲ್ಲಿ ಭೂಕಂಪನ – ರಿಕ್ಟರ್ ಮಾಪಕದಲ್ಲಿ 3.0 ತೀವ್ರತೆ ದಾಖಲು
ಹಂಚಿಕೊಳ್ಳಿ:

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಬಳಿಯ ತಿಮ್ಮೋಜನಹಳ್ಳಿಯಲ್ಲಿ ಇಂದು ಬೆಳಗ್ಗೆ ಭೂಕಂಪನ ಸಂಭವಿಸಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯ ಪ್ರಕಾರ, ಭೂಮಿಯ 10 ಕಿಲೋಮೀಟರ್ ಆಳದಲ್ಲಿ ಈ ಕಂಪನ ಉಂಟಾಗಿದ್ದು ರಿಕ್ಟರ್ ಮಾಪಕದಲ್ಲಿ 3.0 ತೀವ್ರತೆ ದಾಖಲಾಗಿದೆ. ಕೇಂದ್ರಬಿಂದುವಿನ ಸುತ್ತಮುತ್ತಲಿನ 20 ರಿಂದ 30 ಕಿಲೋಮೀಟರ್ ವ್ಯಾಪ್ತಿಯಲ್ಲಿ ಕಂಪನದ ಅನುಭವವಾಗುವ ಸಾಧ್ಯತೆ ಇದ್ದರೂ, ತೀವ್ರತೆ ಕಡಿಮೆ ಇರುವುದರಿಂದ ಯಾವುದೇ ಹಾನಿ ಸಂಭವಿಸಿಲ್ಲ. ಈ ಪ್ರದೇಶವು ಭೂಕಂಪ ವಲಯ-2ರಲ್ಲಿರುವುದರಿಂದ ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಹಂಚಿಕೊಳ್ಳಿ: