ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಕರ್ನಾಟಕ

ದೊಡ್ಡಬಳ್ಳಾಪುರದಲ್ಲಿ ಇಂದು ಬೆಳಗ್ಗೆ ಲಘು ಭೂಕಂಪನ: ರಿಕ್ಟರ್ ಮಾಪಕದಲ್ಲಿ 3.0 ತೀವ್ರತೆ ದಾಖಲು

ದೊಡ್ಡಬಳ್ಳಾಪುರ (ಬೆಂಗಳೂರು ಗ್ರಾಮಾಂತರ): ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಇಂದು ಬೆಳಗ್ಗೆ 9 ಗಂಟೆ 1 ನಿಮಿಷ 59 ಸೆಕೆಂಡಿಗೆ ಲಘು ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 3.0 ತೀವ್...

· ಬೆಂಗಳೂರು ಗ್ರಾಮಾಂತರ
ಬೆಳ್ಳಂಬೆಳಗ್ಗೆ ಕಂಪಿಸಿದ ಬೆಂಗಳೂರು! ದೊಡ್ಡಬಳ್ಳಾಪುರದಲ್ಲಿ ದಿಢೀರ್ ಭೂಕಂಪನ: ರಿಕ್ಟರ್ ಮಾಪಕದಲ್ಲಿ 3.0 ತೀವ್ರತೆ ದಾಖಲು, ಆತಂಕ ಬೇಡ ಎಂದ ತಜ್ಞರು
ಹಂಚಿಕೊಳ್ಳಿ:

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಇಂದು ಬೆಳಿಗ್ಗೆ 9 ಗಂಟೆ 1 ನಿಮಿಷಕ್ಕೆ ಲಘು ಭೂಕಂಪನ ಸಂಭವಿಸಿದೆ. ತಿಮ್ಮೋಜನಹಳ್ಳಿ ಗ್ರಾಮದ ಬಳಿ ಭೂಮಿಯ 10 ಕಿಲೋಮೀಟರ್ ಆಳದಲ್ಲಿ ಕೇಂದ್ರ ಬಿಂದುವಿದ್ದ ಈ ಕಂಪನವು ರಿಕ್ಟರ್ ಮಾಪಕದಲ್ಲಿ 3.0 ತೀವ್ರತೆಯನ್ನು ದಾಖಲಿಸಿದೆ. ಇದರಿಂದ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಸಣ್ಣ ಪ್ರಮಾಣದ ನಡುಕ ಉಂಟಾಗಿ ಸಾರ್ವಜನಿಕರು ಆತಂಕಗೊಂಡಿದ್ದರು. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿ ಹಾನಿಯಾಗಿಲ್ಲ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ. ಈ ಪ್ರದೇಶವು ಭೂಕಂಪನ ವಲಯ-2ರಲ್ಲಿರುವುದರಿಂದ ಸಾರ್ವಜನಿಕರು ಭಯಪಡಬಾರದು ಎಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.

ಹಂಚಿಕೊಳ್ಳಿ: