ಎಕ್ಸ್‌ಪ್ರೆಸ್ ಹೈವೆಯಲ್ಲಿ ಭೀಕರ ಅಪಘಾತ; ಕಾರು ಡಿಕ್ಕಿಯಾಗಿ ಯುವತಿ ಸ್ಥಳದಲ್ಲೇ ದಾರುಣ ಸಾವು!
ರಾಮನಗರ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ಹೈವೆಯಲ್ಲಿ ತಡರಾತ್ರಿ ಅಪಘಾತ ಸಂಭವಿಸಿದೆ. ರಸ್ತೆ ದಾಟುತ್ತಿದ್ದ ಯುವತಿಯೊಬ್ಬಳು ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚನ್ನಪಟ್ಟಣ ತಾಲೂಕಿನ ಸಂಕಲಗೆರೆ ಬಳಿ...

ರಾಮನಗರ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ಹೈವೆಯಲ್ಲಿ ತಡರಾತ್ರಿ ಅಪಘಾತವೊಂದು ನಡೆದಿದೆ. ರಸ್ತೆಯನ್ನು ದಾಟುತ್ತಿದ್ದ ಯುವತಿಯೊಬ್ಬಳಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಆಕೆ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚನ್ನಪಟ್ಟಣ ತಾಲೂಕಿನ ಸಂಕಲಗೆರೆ ಬಳಿ ವರದಿಯಾಗಿದೆ.
ಕುಂಬಳಗೂಡು ಸಮೀಪದ ರಾಮೋಹಳ್ಳಿ ಗ್ರಾಮದ ನಿವಾಸಿ ಭೂಮಿಕಾ (22) ಮೃತಪಟ್ಟ ಯುವತಿ. ಮೃತ ಭೂಮಿಕಾ ನಿನ್ನೆ ತಮ್ಮ ಸ್ನೇಹಿತರ ಜೊತೆ ಚನ್ನಪಟ್ಟಣಕ್ಕೆ ಬಂದಿದ್ದರು. ತಡರಾತ್ರಿ ಸಂಕಲಗೆರೆ ಬಳಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ರಸ್ತೆಯನ್ನು ದಾಟಲು ಪ್ರಯತ್ನಿಸುತ್ತಿದ್ದ ವೇಳೆ, ಅತಿ ವೇಗವಾಗಿ ಬಂದ ಕಾರೊಂದು ಆಕೆಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ತೀವ್ರತೆಗೆ ವಿಪರೀತ ರಕ್ತಸ್ರಾವವಾಗಿ ಯುವತಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಈ ಘಟನೆಗೆ ಸಂಬಂಧಿಸಿದಂತೆ ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




