ಮುಖ್ಯ ವಿಷಯಕ್ಕೆ ಹೋಗಿ
The Karnataka Today
13 Oct
ಸುದ್ದಿ
ಕರ್ನಾಟಕ

ಎಸ್‌ಐಆರ್:ರಾಹುಲ್ ಗಾಂಧಿ ಅರ್ಜಿಯಲ್ಲಿ 10 ಲೋಪಗಳನ್ನು ಗುರುತಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಮತದಾರರ ಪಟ್ಟಿಯ ಸಮಗ್ರ ವಿಶೇಷ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಅಳಿಸಿ ಹಾಕಲಾಗಿದೆ ಹಾಗೂ ವ್ಯಾಪಕ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ ಲೋಕಸಭೆ ವಿರೋಧ ಪ...

ಎಸ್‌ಐಆರ್:ರಾಹುಲ್ ಗಾಂಧಿ ಅರ್ಜಿಯಲ್ಲಿ 10 ಲೋಪಗಳನ್ನು ಗುರುತಿಸಿದ ಸುಪ್ರೀಂ ಕೋರ್ಟ್
ಹಂಚಿಕೊಳ್ಳಿ:

ನವದೆಹಲಿ: ಮತದಾರರ ಪಟ್ಟಿಯ ಸಮಗ್ರ ವಿಶೇಷ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಅಳಿಸಿ ಹಾಕಲಾಗಿದೆ ಹಾಗೂ ವ್ಯಾಪಕ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತಿತರರು ಸಲ್ಲಿಸಿರುವ ಅರ್ಜಿಯಲ್ಲಿ 10ಕ್ಕೂ ಹೆಚ್ಚು ಲೋಪಗಳನ್ನು ಸುಪ್ರೀಂ ಕೋರ್ಟ್ ರಿಜಿಸ್ಟ್ರಿ ಗುರುತಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸಹ ಅರ್ಜಿದಾರರಾಗಿರುವ ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಗುರುತಿನ ಚೀಟಿಯ ಸ್ಪಷ್ಟ ಪ್ರತಿಯನ್ನು ಸಲ್ಲಿಸುವಂತೆ ರಿಜಿಸ್ಟ್ರಿ ಅರ್ಜಿದಾರರ ವಕೀಲರಿಗೆ ಸೂಚಿಸಿದೆ ಎಂದು ಮೂಲಗಳು ತಿಳಿಸಿವೆ.

ಜತೆಗೆ, ಅರ್ಜಿಯಲ್ಲಿನ ಕೆಲವು ಪುಟಗಳು ಅಸ್ಪಷ್ಟವಾಗಿದ್ದು, ಇನ್ನೂ ಕೆಲವು ಪುಟಗಳು ಕಾಣೆಯಾಗಿರುವುದನ್ನು ರಿಜಿಸ್ಟ್ರಿ ಪಟ್ಟಿ ಮಾಡಿದೆ.

ಇದ್ದಲ್ಲದೆ ನ್ಯಾಯಾಲಯದ ಶುಲ್ಕದಲ್ಲಿ ₹200ಕ್ಕೂ ಅಧಿಕ ಕೊರತೆ ಇರುವುದನ್ನೂ ಉಲ್ಲೇಖಿಸಿದೆ.

ಇದಕ್ಕೂ ಮೊದಲು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ವಿರುದ್ಧದ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಿರುವ 'ಇಂಡಿಯಾ' ಮೈತ್ರಿಕೂಟದ ನಾಯಕರು ಸೋಮವಾರ ಸುಪ್ರೀಂ ಕೋರ್ಟ್ ಕದ ತಟ್ಟಿದ್ದಾರೆ. ಮತದಾರರ ಪಟ್ಟಿಯ ಸಮಗ್ರ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಪ್ರಶ್ನಿಸಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ.

ಎಸ್‌ಐಆರ್ ಪ್ರಕ್ರಿಯೆಯ ಸಂದರ್ಭದಲ್ಲಿ ಕೈಬಿಡಲಾದ ಹಾಗೂ ಪರಿಷ್ಕರಿಸಲಾದ ಮತದಾರರ ವಿವರಗಳ ಕುರಿತು ನಿಗದಿತ ಕಾಲಮಿತಿಯೊಳಗೆ ಸ್ವತಂತ್ರ ತನಿಖೆ ನಡೆಸಬೇಕು. ಇದಕ್ಕಾಗಿ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ತಾಂತ್ರಿಕ ಪರಿಣಿತರು ಹಾಗೂ ತಜ್ಞರನ್ನು ಒಳಗೊಂಡ ಸ್ವತಂತ್ರ ಸಮಿತಿಯೊಂದನ್ನು ರಚಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

ಹಂಚಿಕೊಳ್ಳಿ: