ಗೋಕರ್ಣ ಕಡಲತೀರದಲ್ಲಿ ಸಮುದ್ರದ ಸುಳಿಗೆ ಸಿಲುಕಿದ್ದ ಮೂವರು ಪ್ರವಾಸಿಗರ ರಕ್ಷಣೆ
ಕಾರವಾರ: ಸುಳಿಗೆ ಸಿಲುಕಿ ಸಮುದ್ರದಲ್ಲಿ ಮುಳುಗುತ್ತಿದ್ದ ಮೂರು ಜನ ಪ್ರವಾಸಿಗರನ್ನು (Tourists) ಜೀವ ರಕ್ಷಕ ಸಿಬ್ಬಂದಿ ರಕ್ಷಣೆ ಮಾಡಿದ ಘಟನೆ ಉತ್ತರ ಕನ್ನಡ (Uttara Kannada) ಜಿಲ್ಲೆಯ ಗೋಕರ್ಣದ (Gokarna) ಮುಖ್ಯ ಕ...

ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದ ಮುಖ್ಯ ಕಡಲತೀರದಲ್ಲಿ ಈಜಾಡುತ್ತಿದ್ದ ಆರು ಮಂದಿ ಸ್ನೇಹಿತರ ಪೈಕಿ ಮೂವರು ಸುಳಿಗೆ ಸಿಲುಕಿ ನೀರಿನಲ್ಲಿ ಮುಳುಗುತ್ತಿದ್ದರು. ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಜೀವ ರಕ್ಷಕ ಸಿಬ್ಬಂದಿ ಮತ್ತು ವಾಟರ್ ಸ್ಪೋರ್ಟ್ಸ್ ಸಿಬ್ಬಂದಿಗಳು ಸಮಯ ಪ್ರಜ್ಞೆ ಮೆರೆದು ಅವರನ್ನು ರಕ್ಷಿಸಿದ್ದಾರೆ. ರಕ್ಷಣೆಗೆ ಒಳಗಾದವರಲ್ಲಿ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಮಹಮದ್ ಅಪ್ಸನ್ ಅಲಿ, ಅಶ್ರಫ್ ಮೆಹಬೂಬ ಅಲಿ ಹಾಗೂ ಚಿಕ್ಕಬಳ್ಳಾಪುರದ ಶ್ರೀನಿವಾಸ ವೆಂಕಟ ಸ್ವಾಮಿ ಸೇರಿದ್ದಾರೆ. ಮೋಹನ್ ಅಂಬಿಗ, ರೋಷನ್ ಖಾರ್ವಿ, ಲೋಕೇಶ್ ಹರಿಕಂತ್ರ, ರವಿ ನಾಯ್ಕ್, ಶೇಖರ್ ಹರಿಕಂತ್ರ, ದೀಪಕ್ ಗೌಡ ಮತ್ತು ಮಹೇಶ್ ಹೊಸಕಟ್ಟೆ ಅವರು ರಕ್ಷಣಾ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.




