ಗೋಕರ್ಣದ ತದಡಿ ಬಂದರಿನಲ್ಲಿ ವಿಷಗಾಳಿ ಸೇವಿಸಿ ಮೂವರು ಮೀನುಗಾರರ ಸಾವು: 10 ಲಕ್ಷ ಪರಿಹಾರ
ಕಾರವಾರ: ಗೋಕರ್ಣ (Gokarna) ತದಡಿ ಮೀನುಗಾರಿಕಾ ಬಂದರಿನಲ್ಲಿ ಮೀನಿನ ತ್ಯಾಜ್ಯ ತೆರವುಗೊಳಿಸುವ ವೇಳೆ ವಿಷಗಾಳಿ ಸೇವಿಸಿ ಮೂವರು ಮೀನುಗಾರರು (Fishermen Death) ಸಾವನ್ನಪ್ಪಿದ್ದು, ಮೃತರ ಕುಟುಂಬಕ್ಕೆ (Karwar )ತಲಾ 10...

ಕಾರವಾರದ ಗೋಕರ್ಣ ಸಮೀಪದ ತದಡಿ ಮೀನುಗಾರಿಕಾ ಬಂದರಿನಲ್ಲಿ ಮೀನಿನ ತ್ಯಾಜ್ಯವನ್ನು ಸ್ವಚ್ಛಗೊಳಿಸುತ್ತಿದ್ದಾಗ ಉಸಿರುಗಟ್ಟಿ ಮೂವರು ಮೀನುಗಾರರು ಮೃತಪಟ್ಟಿದ್ದಾರೆ. ಕುಜೈಮಾ ಬೋಟ್ನಲ್ಲಿದ್ದ ನೌಶಾದ್, ಅಮೀನ್ ಮತ್ತು ಅಮನ್ ಲಂಗಡೋ ಈ ದುರ್ಘಟನೆಯಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಇದೇ ವೇಳೆ ಇಬ್ಬರು ಅಸ್ವಸ್ಥರಾಗಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ರೂಪಾಯಿ ಪರಿಹಾರವನ್ನು ಮೀನುಗಾರಿಕಾ ಸಚಿವ ಕೆ.ಎಸ್. ಬಸವಂತಪ್ಪ ವಿತರಿಸಿದ್ದು, ಮಕ್ಕಳ ಶಿಕ್ಷಣದ ಜವಾಬ್ದಾರಿಯನ್ನು ಹೊತ್ತುಕೊಳ್ಳುವ ಭರವಸೆ ನೀಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸಲು ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.




