ಗುಂಡ್ಲುಪೇಟೆ: ಆಯುಧ ಪೂಜೆ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿದ ಕಾಂಗ್ರೆಸ್ ಮುಖಂಡ ಕಬ್ಬಳ್ಳಿ ಮಹೇಶ್
ಚಾಮರಾಜನಗರ: ದಸರಾ ಹಬ್ಬ ಹಾಗೂ ಆಯುಧ ಪೂಜೆಯ ಸಂದರ್ಭದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಗಾಳಿಯಲ್ಲಿ ಗುಂಡು ಹಾರಿಸುವ ಮೂಲಕ ಚಾಮರಾಜನಗರ (Chamarajanagara) ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕಬ್ಬಳ್ಳಿ ಗ್ರಾಮದಲ್ಲಿ ಜಿಪಂ ಮ...

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕಬ್ಬಳ್ಳಿ ಗ್ರಾಮದಲ್ಲಿ ಜಿಪಂ ಮಾಜಿ ಉಪಾಧ್ಯಕ್ಷ ಕಬ್ಬಳ್ಳಿ ಮಹೇಶ್ ಅವರು ಆಯುಧ ಪೂಜೆಯ ಸಂದರ್ಭದಲ್ಲಿ ಸಾರ್ವಜನಿಕವಾಗಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ತಮ್ಮ ವಾಹನಗಳಿಗೆ ಪೂಜೆ ಸಲ್ಲಿಸಿದ ನಂತರ ಅವರು ನಡೆಸಿದ ಈ ಅಪ್ರಬುದ್ಧ ವರ್ತನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಜವಾಬ್ದಾರಿಯುತ ಸ್ಥಾನದಲ್ಲಿರುವ ವ್ಯಕ್ತಿಯೊಬ್ಬರು ಕಾನೂನು ಬಾಹಿರವಾಗಿ ವರ್ತಿಸಿ ಸಾರ್ವಜನಿಕರ ಸುರಕ್ಷತೆಗೆ ಅಪಾಯ ಉಂಟುಮಾಡಿರುವುದಕ್ಕೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಈ ಘಟನೆಯನ್ನು ಖಂಡಿಸಿರುವ ವಿವಿಧ ಸಂಘಟನೆಗಳು ಆತನ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿವೆ.




