ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಕರ್ನಾಟಕ

ಹಾಸನದ ಹಾಸ್ಟೆಲ್‌ನಲ್ಲಿ ದ್ವಿತೀಯ ಬಿಕಾಂ ವಿದ್ಯಾರ್ಥಿನಿ ಲಕ್ಷ್ಮೀ ನೇಣಿಗೆ ಶರಣು

ಹಾಸನ: ಬಿಕಾಂ ವಿದ್ಯಾರ್ಥಿನಿಯೊಬ್ಬಳು (Student) ಡೆತ್‌ನೋಟ್‌ ಬರೆದಿಟ್ಟು ನೇಣಿಗೆ ಶರಣಾದ ಘಟನೆ ಹಾಸನ (Hassan) ರವೀಂದ್ರನಗರದಲ್ಲಿರುವ ಒಕ್ಕಲಿಗರ ಸಂಘದ ಮಹಿಳಾ ಹಾಸ್ಟೆಲ್‌ನಲ್ಲಿ ನಡೆದಿದೆ. ಲಕ್ಷ್ಮೀ (20) ಆತ್ಮಹತ್ಯೆ...

· ಹಾಸನ
`ಜೀವನ ಅನ್ಯಾಯ ಮಾಡ್ಬಿಡ್ತು ಅಮ್ಮʼ – ಡೆತ್‌ನೋಟ್‌ ಬರೆದಿಟ್ಟು ನೇಣಿಗೆ ಶರಣಾದ ಬಿಕಾಂ ವಿದ್ಯಾರ್ಥಿನಿ
ಹಂಚಿಕೊಳ್ಳಿ:

ಹಾಸನದ ರವೀಂದ್ರನಗರದಲ್ಲಿರುವ ಒಕ್ಕಲಿಗರ ಸಂಘದ ಮಹಿಳಾ ಹಾಸ್ಟೆಲ್‌ನಲ್ಲಿ ಅರಕಲಗೂಡು ತಾಲೂಕಿನ ಹೊಡೆನೂಡು ಗ್ರಾಮದ ಲಕ್ಷ್ಮೀ ಎಂಬ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ದ್ವಿತೀಯ ವರ್ಷದ ಬಿಕಾಂ ಓದುತ್ತಿದ್ದ ಈಕೆ ಹಾಸ್ಟೆಲ್‌ನ ಕಿಟಕಿಗೆ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾಳೆ. ಘಟನಾ ಸ್ಥಳದಲ್ಲಿ ಪತ್ತೆಯಾದ ಡೆತ್‌ನೋಟ್‌ನಲ್ಲಿ ತನ್ನ ಸಾವಿಗೆ ತಾನೇ ಕಾರಣ ಎಂದು ಬರೆದುಕೊಂಡಿದ್ದು, ಯಾರನ್ನೂ ದೂಷಿಸಬೇಡಿ ಎಂದು ಕೋರಿದ್ದಾಳೆ. ಮಾನಸಿಕವಾಗಿ ಕುಗ್ಗಿ ಈ ನಿರ್ಧಾರ ತೆಗೆದುಕೊಂಡಿರುವುದಾಗಿ ತಿಳಿಸಿದ್ದು, ಈ ಸಂಬಂಧ ಬಡಾವಣೆ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

ಹಂಚಿಕೊಳ್ಳಿ: