ಮುಖ್ಯ ವಿಷಯಕ್ಕೆ ಹೋಗಿ
The Karnataka Today
8 Oct
ಸುದ್ದಿ
ಕರ್ನಾಟಕ

ಹನೂರಿನಲ್ಲಿ ಎರಡು ಕಾರುಗಳ ನಡುವೆ ಭೀಕರ ಅಪಘಾತ – 9 ಮಂದಿಗೆ ಗಂಭೀರ ಗಾಯ

ಚಾಮರಾಜನಗರ: ಎರಡು ಕಾರುಗಳ ನಡುವೆ ಭೀಕರ ಅಪಘಾತ (Accident) ಸಂಭವಿಸಿ 9 ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಹನೂರು (Hanur) ಪಟ್ಟಣದ ಹೊರವಲಯದಲ್ಲಿರುವ ಮಹದೇಶ್ವರ ಐಟಿಐ ಕಾಲೇಜಿನ ಬಳಿ ನಡೆದಿದೆ. ಸುವರ್ಣ, ಲೋಕೇಶ್, ಶ್ರೇ...

· ಚಾಮರಾಜನಗರ
ಹನೂರಿನಲ್ಲಿ ಎರಡು ಕಾರುಗಳ ನಡುವೆ ಭೀಕರ ಅಪಘಾತ – 9 ಮಂದಿಗೆ ಗಂಭೀರ ಗಾಯ
ಹಂಚಿಕೊಳ್ಳಿ:

ಚಾಮರಾಜನಗರ: ಹನೂರು (Hanur) ಪಟ್ಟಣದ ಹೊರವಲಯದಲ್ಲಿರುವ ಮಹದೇಶ್ವರ ಐಟಿಐ ಕಾಲೇಜಿನ ಸಮೀಪ ಎರಡು ಕಾರುಗಳ ನಡುವೆ ಭೀಕರ Accident ಸಂಭವಿಸಿದ್ದು, ಈ ದುರ್ಘಟನೆಯಲ್ಲಿ 9 ಜನರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ.

ಸುವರ್ಣ, ಲೋಕೇಶ್, ಶ್ರೇಯಾ, ರುಕ್ಮಿಣಿ ಮಂಜೇಶ್, ಭಾಗ್ಯಮ್ಮ, ಮಹಾದೇವ, ಮನ್ಸೂರ್, ಮಹಮ್ಮದ್ ದೊಫಿ, ನಿಜಾವುದ್ದಿನ್ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರ ಪೈಕಿ ಏಳು ಮಂದಿಗೆ ತೀವ್ರ ಗಾಯಗಳಾಗಿದ್ದು, ಕೈಕಾಲುಗಳು ಮುರಿದಿವೆ ಎಂದು ತಿಳಿದು ಬಂದಿದೆ. ಒಂದು ಕಾರಿನಲ್ಲಿದ್ದವರು ಮಲೆ ಮಹದೇಶ್ವರಕ್ಕೆ ಪ್ರಯಾಣಿಸುತ್ತಿದ್ದರು. ಮತ್ತೊಂದು ಕಾರಿನಲ್ಲಿದ್ದವರು ಕೊಳ್ಳೇಗಾಲದ ಕಡೆಗೆ ತೆರಳುತ್ತಿದ್ದರು ಎಂದು ಹೇಳಲಾಗಿದೆ. ಇದನ್ನೂ ಓದಿ: ಅಮೃತಸರ | LGBTQ ಪ್ರಭಾವಿ, ಮೇಕಪ್ ಆರ್ಟಿಸ್ಟ್‌ಗೆ ಗುಂಡಿಕ್ಕಿ ಹತ್ಯೆ – ತನಿಖೆ ಚುರುಕು

ಗಾಯಾಳುಗಳನ್ನು ಆಸ್ಪತ್ರೆಗೆ ಕಳುಹಿಸಲಾಗಿದೆ. ಸ್ಥಳಕ್ಕೆ ಹನೂರು ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಆರ್ಕೆಸ್ಟ್ರಾ ನೋಡ್ತಿದ್ದ ವೇಳೆ ದುರಂತ – ಲೈಟ್ ಕಂಬ ಬಿದ್ದು ಓರ್ವ ಸಾವು, ಮತ್ತೋರ್ವ ಗಂಭೀರ

ಹಂಚಿಕೊಳ್ಳಿ: