ಹನೂರು | ಮಳೆಯ ಅಬ್ಬರಕ್ಕೆ ತತ್ತರಿಸಿದ ಪ್ರದೇಶಗಳಲ್ಲಿ ಬಿಜೆಪಿ ನಾಯಕರ ಪರಿಶೀಲನೆ!
ಚಾಮರಾಜನಗರ: ಜಿಲ್ಲೆಯ ಹನೂರು (Hanur) ಭಾಗದಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಕ್ಕೆ ಬಿಜೆಪಿ ನಾಯಕರು ಭೇಟಿ ಕೊಟ್ಟು ಪರಿಶೀಲನೆ ನಡೆಸಿದರು. ಜನರ ಕಷ್ಟವನ್ನು ಆಲಿಸುವ ಕೆಲಸಕ್ಕೆ ಬಿಜೆಪಿ ಮುಖಂಡರು ಮುಂದಾಗಿದ್ದಾರೆ. ದಿನ...


ಚಾಮರಾಜನಗರ: ಜಿಲ್ಲೆಯ ಹನೂರು (Hanur) ಭಾಗದಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಕ್ಕೆ ಬಿಜೆಪಿ ನಾಯಕರು ಭೇಟಿ ಕೊಟ್ಟು ಪರಿಶೀಲನೆ ನಡೆಸಿದರು.
ಜನರ ಕಷ್ಟವನ್ನು ಆಲಿಸುವ ಕೆಲಸಕ್ಕೆ ಬಿಜೆಪಿ ಮುಖಂಡರು ಮುಂದಾಗಿದ್ದಾರೆ. ದಿನಸಿ ಹಾಗೂ ಆಹಾರ ಪದಾರ್ಥಗಳು ಮಳೆಯಿಂದ ಹಾನಿಯಾಗಿತ್ತು. ಈ ಹಿನ್ನೆಲೆ ಹಾನಿಗೊಳಗಾದ 30 ಕ್ಕೂ ಹೆಚ್ಚು ಕುಟುಂಬಗಳಿಗೆ ಆಹಾರ ಕಿಟ್ ವಿತರಣೆ ಮಾಡಿದರು. ಮುಂದಿನ ದಿನಗಳಲ್ಲಿ ಮಳೆ ಬರುವ ಮುನ್ನ ಎಚ್ಚೆತ್ತುಕೊಳ್ಳುವಂತೆ ಆಗ್ರಹಿಸಿದರು.
ಸೇತುವೆ ನಿರ್ಮಾಣದಿಂದ ಮಳೆಯಿಂದ ಪರಿಹಾರ ಸಿಗುತ್ತದೆ. ಅಧಿಕಾರಿಗಳು ಪರಿಹಾರ ವಿತರಣೆ ಕೆಲಸ ಮಾಡಿಲ್ಲ. ಕೂಡಲೇ ಮಳೆ ಹಾನಿಯಿಂದ ನಷ್ಟವಾದ ಕುಟುಂಬಗಳಿಗೆ ಸೂಕ್ತ ಪರಿಹಾರ ಕೊಡಲೂ ಒತ್ತಾಯಸಿದರು.
ಅಧಿಕಾರಿಗಳಿಗೆ 15 ದಿನಗಳ ಗಡುವು ಕೊಟ್ಟಿದ್ದಾರೆ ಎಂದು ಹನೂರು ಬಿಜೆಪಿ ಮುಖಂಡ ನಿಶಾಂತ್ ತಿಳಿಸಿದರು.




