ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಕರ್ನಾಟಕ

ಹೊಸೂರಿನ ಸಿಪ್ ಕಾಟ್ ಬಳಿ ನಿರ್ಮಾಣ ಹಂತದ ಕಟ್ಟಡ ಕುಸಿತ: ಮೂವರು ಕಾರ್ಮಿಕರ ದುರ್ಮರಣ

ಆನೇಕಲ್: ನಿರ್ಮಾಣ ಹಂತದ ಕಾಂಕ್ರೀಟ್ ಕಾಮಗಾರಿ ವೇಳೆ ದುರಂತವೊಂದು ಸಂಭವಿಸಿ ಮೂವರು ಸಾವನ್ನಪ್ಪಿರುವ ಘಟನೆ ತಮಿಳುನಾಡಿನ (Tamilnadu) ಹೊಸೂರು (Hosuru) ಸಮೀಪದ ಸಿಪ್ ಕಾಟ್ ಬಳಿ ನಡೆದಿದೆ. ಖಾಸಗಿ ಕಾರ್ಖಾನೆಯಲ್ಲಿ ದುರಂ...

· ಬೆಂಗಳೂರು ಗ್ರಾಮಾಂತರ
ನಿರ್ಮಾಣ ಹಂತದ ಕಾಮಗಾರಿ ವೇಳೆ ದುರಂತ – ಮೂವರು ಕಾರ್ಮಿಕರು ಸಾವು, ನಾಲ್ವರು ಗಂಭೀರ
ಹಂಚಿಕೊಳ್ಳಿ:

ತಮಿಳುನಾಡಿನ ಹೊಸೂರು ಸಮೀಪದ ಸಿಪ್ ಕಾಟ್ ಪ್ರದೇಶದಲ್ಲಿನ ಖಾಸಗಿ ಕಾರ್ಖಾನೆಯಲ್ಲಿ ಕಟ್ಟಡ ನಿರ್ಮಾಣ ಕಾರ್ಯದ ವೇಳೆ ಭೀಕರ ಅಪಘಾತ ಸಂಭವಿಸಿದೆ. ಕಾಂಕ್ರೀಟ್ ಹಾಕುತ್ತಿದ್ದ ಸಂದರ್ಭದಲ್ಲಿ ಅಳವಡಿಸಿದ್ದ ಸೆಂಟ್ರಿಂಗ್ ಮರಗಳು ಏಕಾಏಕಿ ಕುಸಿದು ಬಿದ್ದಿದ್ದರಿಂದ ಅವಶೇಷಗಳ ಅಡಿಯಲ್ಲಿ ಸಿಲುಕಿ ಕುಮರೇಶನ್, ಮೈಕೆಲ್ ಮತ್ತು ಶ್ರೀನಿವಾಸನ್ ಎಂಬ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಮತ್ತಿತರ ನಾಲ್ವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಜಿಲ್ಲಾಧಿಕಾರಿ ದಿನೇಶ್ ಹಾಗೂ ಎಸ್ಪಿ ಅನಿತಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ನಿರ್ಲಕ್ಷ್ಯದ ಬಗ್ಗೆ ತನಿಖೆ ನಡೆಯುತ್ತಿದೆ.

ಹಂಚಿಕೊಳ್ಳಿ: