ಇಳಕಲ್ ಬಳಿ ರಾಜಸ್ಥಾನಕ್ಕೆ ಸಾಗಿಸುತ್ತಿದ್ದ 35 ಟನ್ ಪಡಿತರ ಅಕ್ಕಿ ವಶ
ಬಾಗಲಕೋಟೆ: ಬಡವರಿಗಾಗಿ ನೀಡಲಾಗುವ ಅನ್ನಭಾಗ್ಯ ಯೋಜನೆಯ (Anna Bhagya) ಪಡಿತರ ಅಕ್ಕಿಯನ್ನು ಅಕ್ರಮವಾಗಿ ಪರರಾಜ್ಯಕ್ಕೆ ಸಾಗಿಸುತ್ತಿದ್ದ ಲಾರಿಯೊಂದನ್ನು ಸ್ಥಳೀಯರು ಬೆನ್ನಟ್ಟಿ ಹಿಡಿದ ಘಟನೆ ಇಳಕಲ್(Ilkal) ಬಳಿ ನಡೆದಿದೆ...

ಬಾಗಲಕೋಟೆ ಜಿಲ್ಲೆಯ ಇಳಕಲ್ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 35 ಟನ್ ಪಡಿತರ ಅಕ್ಕಿಯನ್ನು ಸ್ಥಳೀಯರು ತಡೆಹಿಡಿದಿದ್ದಾರೆ. ಬಡವರಿಗಾಗಿ ಮೀಸಲಾದ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ರಾಜಸ್ಥಾನಕ್ಕೆ ಸಾಗಿಸಲಾಗುತ್ತಿತ್ತು. ರಾತ್ರಿ ವೇಳೆ ಸಂಶಯಾಸ್ಪದವಾಗಿ ಚಲಿಸುತ್ತಿದ್ದ ಲಾರಿಯನ್ನು ಗಮನಿಸಿದ ನಿವಾಸಿಗಳು ಅದನ್ನು ತಡೆದು ಪರಿಶೀಲಿಸಿದಾಗ ಅಕ್ರಮ ಬಯಲಿಗೆ ಬಂದಿದೆ. ಆಹಾರ ಇಲಾಖೆಯ ನಿರ್ಲಕ್ಷ್ಯದ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.




