ಇಮ್ರಾನ್ ಖಾನ್: ಅಕ್ಟೋಬರ್ 28ರೊಳಗೆ ಭಾರತ ತೊರೆಯುವಂತೆ ಮುಂಬೈ ಪೊಲೀಸರ ನೋಟಿಸ್
ಮುಂಬೈ: ಬಾಲಿವುಡ್ ಸೂಪರ್ ಸ್ಟಾರ್ ಅಮೀರ್ ಖಾನ್ ಅವರ ಸಂಬಂಧಿ, ನಟ ಇಮ್ರಾನ್ ಖಾನ್ ಅವರಿಗೆ ಅಕ್ಟೋಬರ್ 28ರ ಒಳಗೆ ದೇಶ ಬಿಡುವಂತೆ ಮುಂಬೈ ಪೊಲೀಸ್ ಅಧಿಕಾರಿಗಳು ಸೂಚಿಸಿದ್ದಾರೆ.ಎಸ್ಐಆರ್ ಅಕ್ರಮ ಆರೋಪ ಸಂಬಂಧ ಮುಖ್ಯ ಚುನಾವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ವಿರುದ್ಧ ಅಕ್ಟೋಬರ್ 10ರಂದು ಮುಂಬೈನಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ನಟ ಇಮ್ರಾನ್ ಖಾನ್ ಅವರಿಗೆ ಅಕ್ಟೋಬರ್ 28ರೊಳಗೆ ಭಾರತ ತೊರೆಯುವಂತೆ ಮುಂಬೈ ಪೊಲೀಸರು ನೋಟಿಸ್ ನೀಡಿದ್ದಾರೆ. ಅಮೆರಿಕ ಪೌರತ್ವ ಹೊಂದಿರುವ ಇಮ್ರಾನ್ ಖಾನ್, ವಲಸೆ ಕಾಯ್ದೆಯ ನಿಯಮಗಳನ್ನು ಉಲ್ಲಂಘಿಸಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರಿಂದ ಈ ಕ್ರಮ ಕೈಗೊಳ್ಳಲಾಗಿದೆ. ಈ ಪ್ರತಿಭಟನೆಯಲ್ಲಿ ಅವರೊಂದಿಗೆ ಲೇಖಾ ವಾಷಿಂಗ್ಟನ್ ಮತ್ತು ಝೈನ್ ಮೇರಿ ಖಾನ್ ಎಂ. ಕೂಡ ಇದ್ದರು. ಇಮ್ರಾನ್ ಅವರನ್ನು ಗಡೀಪಾರು ಮಾಡುವಂತೆ ಬಿಜೆಪಿ ನಾಯಕ ಕಿರಿಟ್ ಸೋಮಯ್ಯ ಆಗ್ರಹಿಸಿದ್ದರು.




