ಇಂಡಿಯಾ ಮೈತ್ರಿಕೂಟ,ವಿದ್ಯಾರ್ಥಿ ನಾಯಕರು ಹಾಗೂ ನಾಗರಿಕ ಸಂಘಟನೆಗೆ ರಾಹುಲ್ ಚಹಾ ಕೂಟ
ನವದೆಹಲಿ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು 'ಇಂಡಿಯಾ' ಮೈತ್ರಿಕೂಟದ ಸಂಸದರು, ನಾಗರಿಕ ಸಂಘಟನೆಯ ಪ್ರಮುಖರು ಹಾಗೂ ವಿವಿಧ ವಿದ್ಯಾರ್ಥಿ ಸಂಘಟನೆಗಳ ನಾಯಕರಿಗೆ ಮಂಗಳವಾರ ತಮ್ಮ ನಿವಾಸದಲ್ಲಿ ಚಹಾ ಕೂಟ ಏರ್ಪ...

ನವದೆಹಲಿ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು 'ಇಂಡಿಯಾ' ಮೈತ್ರಿಕೂಟದ ಸಂಸದರು, ನಾಗರಿಕ ಸಂಘಟನೆಯ ಪ್ರಮುಖರು ಹಾಗೂ ವಿವಿಧ ವಿದ್ಯಾರ್ಥಿ ಸಂಘಟನೆಗಳ ನಾಯಕರಿಗೆ ಮಂಗಳವಾರ ತಮ್ಮ ನಿವಾಸದಲ್ಲಿ ಚಹಾ ಕೂಟ ಏರ್ಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮತ ಕಳ್ಳತನ ಆರೋಪಕ್ಕೆ ಸಂಬಂಧಿಸಿದಂತೆ ವಿಪಕ್ಷಗಳು ನಡೆಸುತ್ತಿರುವ ತೀವ್ರ ಪ್ರತಿಭಟನೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದಂತೆ ಈ ಮಹತ್ವದ ಸಭೆ ಆಯೋಜನೆಗೊಂಡಿದೆ.
ಮಂಗಳವಾರ ಮಧ್ಯಾಹ್ನ ವಿಪಕ್ಷಗಳ ನಾಯಕರ ಜಂಟಿ ಸುದ್ದಿಗೋಷ್ಠಿ ನಡೆಯಲಿದೆ. ಬಳಿಕ ಸುನೇಹ್ರಿ ಬಾಗ್ ರಸ್ತೆಯ ಸಮೀಪದಲ್ಲಿರುವ ರಾಹುಲ್ ಗಾಂಧಿ ಅವರ ನಿವಾಸದಲ್ಲಿ ಚಹಾ ಕೂಟ ಏರ್ಪಡಿಸಲಾಗಿದೆ.
ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ವಿರುದ್ಧದ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಿರುವ 'ಇಂಡಿಯಾ' ಮೈತ್ರಿಕೂಟದ ನಾಯಕರು ಸೋಮವಾರ ಸುಪ್ರೀಂ ಕೋರ್ಟ್ ಕದ ತಟ್ಟಿದ್ದಾರೆ. ಮತದಾರರ ಪಟ್ಟಿಯ ಸಮಗ್ರ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಪ್ರಶ್ನಿಸಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ.
ಸೋಮವಾರದಂದು ಕಾಂಗ್ರೆಸ್ ಪಕ್ಷವು ಇಂಡಿಯಾ ಬಣದ ದಿಗ್ಗಜ ನಾಯಕರನ್ನು ಒಗ್ಗೂಡಿಸಿಕೊಂಡು ಅಸಂಖ್ಯ ಕಾರ್ಯಕರ್ತರೊಂದಿಗೆ ಸುಪ್ರೀಂ ಕೋರ್ಟ್‌ವರೆಗೆ ಸೋಮವಾರ ದಿಲ್ಲಿ ಚಲೋ ನಡೆಸಿತು.
ಈ ವಿಚಾರ ನ್ಯಾಯಾಲಯದ ವ್ಯಾಪ್ತಿಯಲ್ಲಿರುವುದರಿಂದ ಭೇಟಿಗೆ ಅವಕಾಶ ನೀಡಲಾಗದು ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಉಭಯ ಸದನಗಳ ವಿರೋಧ ಪಕ್ಷದ ನಾಯಕರ ಮನವಿಯನ್ನು ತಿರಸ್ಕರಿಸಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

ರಾಹುಲ್ ಗಾಂಧಿ




