ಜಂತರ್ ಮಂತರ್: ಪ್ರತಿಭಟನಾ ಸ್ಥಳಗಳ ಪಟ್ಟಿಯಿಂದ ಕೈಬಿಟ್ಟ ದೆಹಲಿ ಪೊಲೀಸರು
ನವದೆಹಲಿ: ದೆಹಲಿಯ ಜಂತರ್ ಮಂತರ್ ಅನ್ನು ಪ್ರತಿಭಟನಾ ಸ್ಥಳ ಪಟ್ಟಿಯಿಂದ ದೆಹಲಿ ಪೊಲೀಸರು ಅಧಿಕೃತವಾಗಿ ತೆರವುಗೊಳಿಸಿದ್ದಾರೆ. ಇದರ ಬದಲಾಗಿ ಸಾರ್ವಜನಿಕರ ಪ್ರತಿಭಟನೆಗಳಿಗಾಗಿ ಮೂರು ಹೊಸ ಸ್ಥಳಗಳನ್ನು ಗುರುತಿಸಿ, ದೆಹಲಿ ಪೊ...

ನವದೆಹಲಿ: ದೆಹಲಿಯ ಜಂತರ್ ಮಂತರ್ ಅನ್ನು ಪ್ರತಿಭಟನಾ ಸ್ಥಳಗಳ ಪಟ್ಟಿಯಿಂದ ದೆಹಲಿ ಪೊಲೀಸರು ಅಧಿಕೃತವಾಗಿ ಕೈಬಿಟ್ಟಿದ್ದಾರೆ.
ಇದರ ಬದಲಾಗಿ ಸಾರ್ವಜನಿಕ ಪ್ರತಿಭಟನೆಗಳನ್ನು ನಡೆಸಲು ಮೂರು ಹೊಸ ಪ್ರದೇಶಗಳನ್ನು ನಿಗದಿಪಡಿಸಿ, ದೆಹಲಿ ಪೊಲೀಸ್ ಆಯುಕ್ತ ಅನುರಾಗ್ ಕುಮಾರ್ ಅವರು ಅಧಿಕೃತ ಆದೇಶವನ್ನು ಹೊರಡಿಸಿದ್ದಾರೆ.
ಆದೇಶದಲ್ಲಿ ತಿಳಿಸಿರುವಂತೆ, ಇನ್ನು ಮುಂದೆ ರಾಮಲೀಲಾ ಮೈದಾನ, ಬುರಾರಿ ಮೈದಾನ ಹಾಗೂ ಪೂರ್ವ ದೆಹಲಿಯ ಸಿಬಿಡಿ ಮೈದಾನಗಳಲ್ಲಿ ಮಾತ್ರ ಪ್ರತಿಭಟನೆಗಳನ್ನು ನಡೆಸಬೇಕಾಗುತ್ತದೆ.
ಪ್ರತಿಭಟನೆಗಳಿಗೆ ಸೂಕ್ತವಾದ ಪರ್ಯಾಯ ಸ್ಥಳಗಳನ್ನು ಪರಿಶೀಲಿಸಲು ಕೇಂದ್ರ ಗೃಹ ಸಚಿವಾಲಯ ಒಂದು ಸಮಿತಿಯನ್ನು ರಚನೆ ಮಾಡಿತ್ತು.
ಈ ಸಮಿತಿಯು ನೀಡಿದ ಶಿಫಾರಸಿನ ಆಧಾರದ ಮೇಲೆ ಜಂತರ್ ಮಂತರ್ ಅನ್ನು ಪ್ರತಿಭಟನಾ ಸ್ಥಳಗಳ ಪಟ್ಟಿಯಿಂದ ತೆಗೆದುಹಾಕಲಾಗಿದೆ. ಈ ಮೂರು ಹೊಸ ಸ್ಥಳಗಳಲ್ಲಿ ಧರಣಿಗಳನ್ನು ಆಯೋಜಿಸುವ ಕುರಿತಂತೆ ಶೀಘ್ರದಲ್ಲೇ ಪರಿಷ್ಕೃತ ಪ್ರಮಾಣಿತ ಕಾರ್ಯಾಚರಣೆ ವಿಧಾನ (ಎಸ್‌ಒಪಿ) ಬಿಡುಗಡೆ ಮಾಡಲಾಗುವುದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಜಂತರ್ ಮಂತರ್ ಬಳಿ ಬೃಹತ್ ಮಟ್ಟದ ಪ್ರತಿಭಟನೆಗಳಿಗೆ ಕರೆ ನೀಡಲಾಗಿರುವ ಹಿನ್ನೆಲೆಯಲ್ಲಿ ರಾಜಧಾನಿಯಲ್ಲಿ ಬಿಗಿ ಭದ್ರತೆಯನ್ನು ಏರ್ಪಡಿಸಲಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಪೊಲೀಸರು ಈ ನಿರ್ಧಾರವನ್ನು ಕೈಗೊಂಡಿದ್ದಾರೆ.




