ಕಾರವಾರ: ಅಕ್ಟೋಬರ್ 23 ರಂದು ಪದವೀಧರರ ಕ್ಷೇತ್ರದ ಮತದಾರರಿಗೆ ವಿಶೇಷ ರಜೆ ಘೋಷಣೆ
ಕಾರವಾರ: ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆ ಅ. 23 ರಂದು ನಡೆಯಲಿದ್ದು, ಅಂದು ಮತದಾರ ನೌಕರರು ಪೂರ್ವಾನುಮತಿ ಪಡೆಯುವ ಷರತ್ತಿಗೊಳಪಟ್ಟು ವಿಶೇಷ ಸಾಂದರ್ಭಿಕ ರಜೆ ಪಡೆಯಬಹುದು. ಅರ್ಹ ಪದವೀಧರ ಮತದಾರರು ಮ...

ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆ ಅಕ್ಟೋಬರ್ 23 ರಂದು ನಿಗದಿಯಾಗಿದೆ. ಈ ಹಿನ್ನೆಲೆಯಲ್ಲಿ ಮತದಾನ ಮಾಡುವ ಅರ್ಹ ನೌಕರರಿಗೆ ಅಂದು ವಿಶೇಷ ಸಾಂದರ್ಭಿಕ ರಜೆ ನೀಡಲು ನಿರ್ಧರಿಸಲಾಗಿದೆ. ರಜೆ ಪಡೆಯಲು ನೌಕರರು ಮುಂಚಿತವಾಗಿ ಅನುಮತಿ ಪಡೆಯುವುದು ಕಡ್ಡಾಯವಾಗಿದೆ. ಉತ್ತರ ಕನ್ನಡ, ಧಾರವಾಡ, ಗದಗ ಹಾಗೂ ಹಾವೇರಿ ಜಿಲ್ಲೆಗಳ ವ್ಯಾಪ್ತಿಯಲ್ಲಿರುವ ಮತದಾರರಿಗೆ ಮಾತ್ರ ಈ ಸೌಲಭ್ಯ ಸಿಗಲಿದೆ ಎಂದು ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತೆ ಕೆ.ಎಮ್.ಜಾನಕಿ ತಿಳಿಸಿದ್ದಾರೆ.




