ಕಬ್ಬಿನ MSP ಏರಿಸಿ, ಟನ್‌ಗೆ 6 ಸಾವಿರ ರೂ. ನಿಗದಿಪಡಿಸಿ: ಕೇಂದ್ರಕ್ಕೆ ಸಚಿವ ಸತೀಶ್ ಜಾರಕಿಹೊಳಿ ಒತ್ತಾಯ!
ಬೆಳಗಾವಿ: ಕಬ್ಬಿನ ಬೆಲೆ ನಿಗದಿ ಮಾಡುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ. ಹೀಗಾಗಿ, ಕಬ್ಬಿನ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ಹೆಚ್ಚಿಸಿ ಟನ್‌ಗೆ ರೂ.6,000 ನಿಗದಿ ಮಾಡಬೇಕು ಎಂದು ಸಚಿವ ಸತೀಶ್ ಜಾರಕಿಹೊಳಿ ಅವರ...

ಬೆಳಗಾವಿ: ಕಬ್ಬಿನ ಬೆಲೆ ನಿಗದಿ ಮಾಡುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ. ಹೀಗಾಗಿ, ಕಬ್ಬಿನ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ಹೆಚ್ಚಿಸಿ ಟನ್‌ಗೆ ರೂ.6,000 ನಿಗದಿ ಮಾಡಬೇಕು ಎಂದು ಸಚಿವ ಸತೀಶ್ ಜಾರಕಿಹೊಳಿ ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಕಬ್ಬಿನ ಎಂಎಸ್‌ಪಿ ಹೆಚ್ಚಿಸುವಂತೆ ರಾಜ್ಯ ಸರ್ಕಾರ ಈಗಾಗಲೇ ಕೇಂದ್ರಕ್ಕೆ ಕರಡು ಪ್ರಸ್ತಾವನೆ ಸಲ್ಲಿಸಿದೆ. ಪ್ರತಿ ವರ್ಷ ಎಂಎಸ್‌ಪಿ ಹೆಚ್ಚಿಸುವಂತೆ ನಾವು ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತಿದ್ದೇವೆ. ಆದರೆ, ಈವರೆಗೆ ಯಾವುದೇ ಹೆಚ್ಚಳವಾಗಿಲ್ಲ ಎಂದು ಹೇಳಿದರು.
ಇದೇ ವಳೆ ರೈತರೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಕೇಂದ್ರ ಸರ್ಕಾರ ಸಭೆಗೆ ಆಹ್ವಾನಿಸಿದರೆ ರಾಜ್ಯ ಸರ್ಕಾರ ಭಾಗವಹಿಸಲಿದೆ ಎಂದು ತಿಳಿಸಿದರು.
ಈವರೆಗೆ ಕೇಂದ್ರದಿಂದ ನಮಗೆ ಯಾವುದೇ ಆಹ್ವಾನ ಬಂದಿಲ್ಲ. ಸಕ್ಕರೆ ಕಾರ್ಖಾನೆಗಳು ಹಾಗೂ ರೈತರ ನಡುವೆ ಒಪ್ಪಂದವಾದ ಬಳಿಕವಷ್ಟೇ ಪ್ರಕ್ರಿಯೆ ಆರಂಭವಾಗಲಿದೆ. ಇನ್ನೂ ಸಮಯವಿದೆ ಎಂದರು.
ಇದೇ ವೇಳೆ, ನಡೆಯುತ್ತಿರುವ ಮತದಾರರ ಪಟ್ಟಿಯ ಪರಿಷ್ಕರಣೆ ಕುರಿತು ಚುನಾವಣಾಧಿಕಾರಿಗಳೊಂದಿಗೆ ಚರ್ಚಿಸಿರುವುದಾಗಿ ಸಚಿವರು ತಿಳಿಸಿದರು.
ಸಚಿವ ಸತೀಶ್ ಜಾರಕಿಹೊಳಿ ಹೂಡಿಕೆಗಳ ಜಾಡು; ಆಫ್ರಿಕಾದ ಕಾಂಗೋ ತನಿಖೆಯ ಕೇಂದ್ರಬಿಂದು: ED ಎಕ್ಸ್ ಪೋಸ್ಟ್ ನಲ್ಲಿ ಏನಿದೆ?
ಉದ್ದೇಶಪೂರ್ವಕವಾಗಿ ಮತದಾರರ ಹೆಸರು ಅಳಿಸುವಂತೆ ಸುಳ್ಳು ಅರ್ಜಿಗಳನ್ನು ಸಲ್ಲಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬಹುದು ಎಂದು ಹೇಳಿದರು.
ಅರ್ಜಿಯೊಂದು ಸಲ್ಲಿಕೆಯಾದ ಬಳಿಕ ಏಳು ದಿನಗಳೊಳಗೆ ನೋಟಿಸ್ ನೀಡಲಾಗುತ್ತದೆ. ಆರೋಪಗಳನ್ನು ಸಾಬೀತುಪಡಿಸಲು ಸಾಧ್ಯವಾಗದಿದ್ದರೆ ಪ್ರಕರಣ ದಾಖಲಿಸಬಹುದು ಎಂದು ಅವರು ಹೇಳಿದರು.
ಮತದಾರರ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಸ್ಪಷ್ಟ ನಿಯಮಗಳಿದ್ದು, ಬಿಎಲ್‌ಎ-2 ಮೂಲಕವೂ ಅರ್ಜಿ ಸಲ್ಲಿಸಬಹುದು. ಅರ್ಹ ಮತದಾರರ ಮತದಾನದ ಹಕ್ಕಿಗೆ ಧಕ್ಕೆಯಾದರೆ ಆಕ್ಷೇಪಣೆ ಸಲ್ಲಿಸಲು ಕೂಡ ಅವಕಾಶವಿದೆ ಎಂದರು.
ಬೆಳಗಾವಿಯಲ್ಲಿ ಒಬ್ಬನೇ ಒಬ್ಬ ಅರ್ಹ ಮತದಾರನ ಹೆಸರನ್ನೂ ಮತದಾರರ ಪಟ್ಟಿಯಿಂದ ಅಳಿಸಲಾಗಿಲ್ಲ. ಪಟ್ಟಿಯಿಂದ ಹೆಸರು ಕೈಬಿಡಲಾಗಿದ್ದರೆ, ಈ ಕುರಿತು ಅಧಿಕಾರಿಗಳ ಗಮನಕ್ಕೆ ತಂದ ಬಳಿಕ ಅದನ್ನು ಮರುಸೇರ್ಪಡೆಗೊಳಿಸಲು ಸಾಧ್ಯವಿದೆ ಎಂದು ತಿಳಿಸಿದರು.




