ಕಲಬುರಗಿ: ಪಟಾಕಿ ಎಂದು ಭಾವಿಸಿ ಮದ್ದಿಗೆ ಬೆಂಕಿ ಹಚ್ಚಿದ 15 ವರ್ಷದ ಬಾಲಕ ಸಾವು
ಕಲಬುರಗಿ: ಹಂದಿ ಓಡಿಸಲು ಇಟ್ಟಿದ್ದ ಮದ್ದನ್ನು ಪಟಾಕಿ ಅಂತ ತಿಳಿದು ಬೆಂಕಿ ಹಚ್ಚಿದ ಪರಿಣಾಮ ತಲೆ ಛಿದ್ರಗೊಂಡು ಬಾಲಕ ಸಾವನ್ನಪ್ಪಿರುವ ದಾರುಣ ಘಟನೆ ಕಲಬುರಗಿಯಲ್ಲಿ ನಡೆದಿದೆ. ಸೇಡಂ ತಾಲ್ಲೂಕಿನ ಹಂದರಕಿ ಗ್ರಾಮದಲ್ಲಿ ಘಟನೆ...

ಕಲಬುರಗಿ ಜಿಲ್ಲೆಯ ಸೇಡಂ ತಾಲ್ಲೂಕಿನ ಹಂದರಕಿ ಗ್ರಾಮದಲ್ಲಿ ದುರಂತವೊಂದು ಸಂಭವಿಸಿದೆ. ಹಂದಿಗಳನ್ನು ಓಡಿಸಲು ತಂದಿಟ್ಟಿದ್ದ ಸ್ಫೋಟಕ ಮದ್ದನ್ನು ಪಟಾಕಿ ಎಂದು ತಪ್ಪಾಗಿ ಭಾವಿಸಿದ ಭೀಮರಾಯ ಎಂಬ ಬಾಲಕ ಅದಕ್ಕೆ ಬೆಂಕಿ ಹಚ್ಚಿದ್ದಾನೆ. ಈ ವೇಳೆ ತೀವ್ರ ಸ್ಫೋಟ ಸಂಭವಿಸಿದ ಪರಿಣಾಮ ಬಾಲಕನ ತಲೆ ಛಿದ್ರಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಘಟನೆ ಸಂಬಂಧ ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.




