ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಕರ್ನಾಟಕ

ಕಲಬುರಗಿಯಲ್ಲಿ ಲಷ್ಕರ್ ಸಂಪರ್ಕದ ಶಂಕೆ: ಪಶ್ಚಿಮ ಬಂಗಾಳದ ವ್ಯಕ್ತಿಯನ್ನು ವಶಕ್ಕೆ ಪಡೆದ ಪೊಲೀಸರು

– ಲಷ್ಕರ್‌ ಸಂಘಟನೆಯೊಂದಿಗೆ ಪ್ರಮುಖ ಮಾಹಿತಿಗಳ ಹಂಚಿಕೆ ಶಂಕೆ – ಗುಪ್ತಚರ ಇಲಾಖೆ, ಸ್ಥಳೀಯ ಪೊಲೀಸರ ಜಂಟಿ ಕಾರ್ಯಾಚರಣೆ ಕಲಬುರಗಿ: ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್ ಎ ತೊಯ್ಬಾದೊಂದಿಗೆ (LeT) ಸಂಪರ್ಕ ಹೊಂದ...

· ಕಲಬುರಗಿ
ಪಾಕ್‌ ಮೂಲದ ಉಗ್ರರೊಂದಿಗೆ ನಂಟಿನ ಶಂಕೆ – ಕಲಬುರಗಿಯಲ್ಲಿ ಬಂಗಾಳ ಮೂಲದ ಶಂಕಿತ ವಶಕ್ಕೆ
ಹಂಚಿಕೊಳ್ಳಿ:

ಕಲಬುರಗಿಯ ಸರಾಫ್ ಬಜಾರ್‌ನಲ್ಲಿ ಚಿನ್ನಾಭರಣ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಪಶ್ಚಿಮ ಬಂಗಾಳ ಮೂಲದ ಮಮ್ತಾಜ್ ವುಲ್ ಮಲೀಕ್ ಎಂಬಾತನನ್ನು ಪೊಲೀಸರು ಮತ್ತು ಗುಪ್ತಚರ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಈತ ಸಾಮಾಜಿಕ ಜಾಲತಾಣಗಳ ಮೂಲಕ ಲಷ್ಕರ್-ಎ-ತಯ್ಯಬಾ ಸಂಘಟನೆಯೊಂದಿಗೆ ಸಂಪರ್ಕ ಸಾಧಿಸಿ, ಗೌಪ್ಯ ಮಾಹಿತಿಯನ್ನು ಹಂಚಿಕೊಳ್ಳುತ್ತಿದ್ದಾನೆ ಎಂಬ ಅನುಮಾನ ವ್ಯಕ್ತವಾಗಿದೆ. ಬ್ರಹ್ಮಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ವಶಕ್ಕೆ ಪಡೆದ ವ್ಯಕ್ತಿಯ ಹಿನ್ನೆಲೆ ಮತ್ತು ಆತನ ಸಂಪರ್ಕ ಜಾಲದ ಬಗ್ಗೆ ತನಿಖೆ ಮುಂದುವರಿದಿದೆ. ಇತ್ತೀಚೆಗೆ ಉತ್ತರ ಪ್ರದೇಶದ ಯುವಕನ ಬಂಧನದ ಬೆನ್ನಲ್ಲೇ ಈ ಘಟನೆ ನಡೆದಿರುವುದು ಸ್ಥಳೀಯವಾಗಿ ಆತಂಕ ಮೂಡಿಸಿದೆ.

ಹಂಚಿಕೊಳ್ಳಿ: