ಕೆಆರ್ಎಸ್ನಲ್ಲಿ ಇಂದು ಕಾವೇರಿ ಆರತಿ ಕಾರ್ಯಕ್ರಮಕ್ಕೆ ಡಿ.ಕೆ. ಶಿವಕುಮಾರ್ ಚಾಲನೆ
ಮಂಡ್ಯ: ವಾರಣಾಸಿಯ ಗಂಗಾರತಿಯ (Gangarathi) ಮಾದರಿಯಲ್ಲೇ ಕರ್ನಾಟಕದಲ್ಲೂ (Karnataka) ಕಾವೇರಿ ನದಿಗೆ (Cauvery River) ಪೂಜೆ ಸಲ್ಲಿಸುವ ಮಹತ್ವಾಕಾಂಕ್ಷೆಯ ಕಾವೇರಿ ಆರತಿ (Cauvery Aarathi) ಕಾರ್ಯಕ್ರಮದ ಎರಡನೇ ವ...

ಮಂಡ್ಯದ ಕೆಆರ್ಎಸ್ ಬೃಂದಾವನದಲ್ಲಿ ಕಾವೇರಿ ಆರತಿ ಕಾರ್ಯಕ್ರಮದ ಎರಡನೇ ವರ್ಷದ ಆವೃತ್ತಿಯು ಇಂದಿನಿಂದ ಆರಂಭವಾಗಲಿದೆ. ಸಂಜೆ 6 ಗಂಟೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾವೇರಿ ನದಿಗೆ ಪುಷ್ಪಾರ್ಚನೆ ನೆರವೇರಿಸುವ ಮೂಲಕ ಈ ಧಾರ್ಮಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಒಟ್ಟು 12 ರಿಂದ 13 ಮಂದಿ ತರಬೇತಿ ಪಡೆದ ವೈದಿಕರು ಆರತಿ ಕಾರ್ಯಕ್ರಮವನ್ನು ನಡೆಸಿಕೊಡಲಿದ್ದು, ಇದು ಮುಂದಿನ 6 ದಿನಗಳ ಕಾಲ ನಿರಂತರವಾಗಿ ನಡೆಯಲಿದೆ. ರಾಜ್ಯ ಮತ್ತು ಹೊರರಾಜ್ಯಗಳಿಂದ ಆಗಮಿಸುವ ಪ್ರವಾಸಿಗರಿಗಾಗಿ ವಿಶೇಷ ಆಸನಗಳ ವ್ಯವಸ್ಥೆ ಮಾಡಲಾಗಿದೆ.




