ಕೆಮ್ಮಣ್ಣುಗುಂಡಿ ಬಳಿ ಹುಲಿ ಪ್ರತ್ಯಕ್ಷ: ಪ್ರವಾಸಿಗರಿಗೆ ಎಚ್ಚರಿಕೆ ನೀಡಿದ ಅರಣ್ಯ ಇಲಾಖೆ
ಚಿಕ್ಕಮಗಳೂರು: ಕೆಮ್ಮಣ್ಣುಗುಂಡಿ (Kemmangundi) ಬಳಿ ಹುಲಿಯೊಂದು (Tiger) ಕಾಣಿಸಿಕೊಂಡಿದೆ. ಹುಲಿಯ ಓಡಾಟದ ದೃಶ್ಯಗಳು ಪ್ರವಾಸಿಗರ ಮೊಬೈಲ್ನಲ್ಲಿ ಸೆರೆಯಾಗಿದ್ದು, ಈ ಭಾಗಕ್ಕೆ ತೆರಳುವ ಪ್ರವಾಸಿಗರು ಎಚ್ಚರಿಕೆಯಿಂದ ಇರ...

ಚಿಕ್ಕಮಗಳೂರಿನ ಕೆಮ್ಮಣ್ಣುಗುಂಡಿ, ಕಲ್ಲತ್ತಿಗರಿ ಮತ್ತು ಹೆಬ್ಬೆ ಫಾಲ್ಸ್ ಸುತ್ತಮುತ್ತ ಹುಲಿಯೊಂದು ಕಾಣಿಸಿಕೊಂಡಿದೆ. ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಯಲ್ಲಿ ರಸ್ತೆಯ ಪಕ್ಕದಲ್ಲಿಯೇ ಹುಲಿ ಓಡಾಡುತ್ತಿರುವುದು ಪ್ರವಾಸಿಗರ ಮೊಬೈಲ್ನಲ್ಲಿ ಸೆರೆಯಾಗಿದೆ. ಈ ದೃಶ್ಯಗಳಿಂದ ಸ್ಥಳೀಯರು ಹಾಗೂ ಪ್ರವಾಸಿಗರಲ್ಲಿ ಆತಂಕ ಉಂಟಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಈ ಪ್ರದೇಶದಲ್ಲಿ ಸಂಚರಿಸುವ ಸಾರ್ವಜನಿಕರು ಮತ್ತು ಪ್ರವಾಸಿಗರು ಜಾಗರೂಕರಾಗಿರಬೇಕು ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ಸೂಚನೆ ನೀಡಿದ್ದಾರೆ.




