ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಕರ್ನಾಟಕ

ಕೊಚ್ಚಿ: ಬೆಂಜ್ ಕಾರು ಅಪಘಾತ ಪ್ರಕರಣದಲ್ಲಿ ನ್ಯಾಯಾಧೀಶರನ್ನು ಬಂಧಿಸದಂತೆ ಹೈಕೋರ್ಟ್ ತಡೆ

ಕೊಚ್ಚಿ: ತ್ರಿಶ್ಶೂರ್ ಜಿಲ್ಲಾ ನ್ಯಾಯಾಲಯದ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರ ಅಪ್ರಾಪ್ತ ಪುತ್ರ ಚಲಾಯಿಸುತ್ತಿದ್ದ ಕಾರು ಡಿಕ್ಕಿಯಾಗಿ ಬೀದಿಬದಿ ವ್ಯಾಪಾರಿಯೊಬ್ಬರು ಮೃತಪಟ್ಟಿದ್ದರು. ಈ ಪ್ರಕರಣ ಸಂಬಂಧ ಸದರಿ ನ್ಯಾಯಾಧೀಶರನ...

ಬೆಂಜ್ ಕಾರು ಅಪಘಾತ: ನ್ಯಾಯಾಧೀಶರನ್ನು ಬಂಧಿಸದಂತೆ ಪೊಲೀಸರಿಗೆ ಹೈಕೋರ್ಟ್ ನಿರ್ದೇಶನ
ಹಂಚಿಕೊಳ್ಳಿ:

ಎರ್ನಾಕುಲಂನಲ್ಲಿ ಅಕ್ಟೋಬರ್ 25ರಂದು ಸಂಭವಿಸಿದ ರಸ್ತೆ ಅಪಘಾತದಲ್ಲಿ ಜಯಬಾಲಕೃಷ್ಣನ್ ಎಂಬುವರು ಮೃತಪಟ್ಟಿದ್ದರು. ತ್ರಿಶ್ಶೂರ್ ಜಿಲ್ಲಾ ನ್ಯಾಯಾಲಯದ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರ ಅಪ್ರಾಪ್ತ ಪುತ್ರ ಚಲಾಯಿಸುತ್ತಿದ್ದ ಕಾರು ಡಿಕ್ಕಿ ಹೊಡೆದಿದ್ದರಿಂದ ಈ ದುರ್ಘಟನೆ ನಡೆದಿತ್ತು. ಈ ಪ್ರಕರಣದಲ್ಲಿ ನ್ಯಾಯಾಧೀಶರನ್ನು ಬಂಧಿಸದಂತೆ ಕೇರಳ ಹೈಕೋರ್ಟ್ ಪೊಲೀಸರಿಗೆ ಸೂಚನೆ ನೀಡಿದೆ. ನ್ಯಾಯಮೂರ್ತಿ ಕೌಸರ್ ಎಡಪ್ಪಗತ್ ಅವರ ಪೀಠವು ಈ ಆದೇಶ ನೀಡಿದ್ದು ತನಿಖೆಗೆ ಸಹಕರಿಸುವಂತೆ ನ್ಯಾಯಾಧೀಶರಿಗೆ ತಿಳಿಸಿದೆ. ಮೃತರ ಕುಟುಂಬಸ್ಥರು ನ್ಯಾಯಾಲಯದ ತೀರ್ಪನ್ನು ಗೌರವಿಸುವುದಾಗಿ ತಿಳಿಸಿದ್ದು ಕಾನೂನು ಹೋರಾಟ ಮುಂದುವರಿಸಲು ನಿರ್ಧರಿಸಿದ್ದಾರೆ.

ಹಂಚಿಕೊಳ್ಳಿ: