ಲಾರಿಗೆ ಕಾರು ಗುದ್ದಿ ಭೀಕರ ಅಪಘಾತ – ಮೂವರ ಸಾವು, ಇಬ್ಬರಿಗೆ ಗಾಯ!
ಚಿತ್ರದುರ್ಗ: ಲಾರಿಗೆ (Lorry) ಕಾರು (Car) ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ಚಿತ್ರದುರ್ಗ (Chitradurga) ಜಿಲ್ಲೆ ಹಿರಿಯೂರು (Hiriyur) ತಾಲೂಕಿನ ಕೆಆರ್ ಹಳ್ಳಿ ಗೇಟ್...

ಚಿತ್ರದುರ್ಗ (Chitradurga) ಜಿಲ್ಲೆಯ ಹಿರಿಯೂರು (Hiriyur) ತಾಲೂಕಿನ ಕೆಆರ್ ಹಳ್ಳಿ ಗೇಟ್ ಬಳಿ ಲಾರಿಗೆ (Lorry) ಕಾರು (Car) ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ಸಂಭವಿಸಿದೆ.
ಈ ದುರ್ಘಟನೆಯಲ್ಲಿ ಕಾರಿನಲ್ಲಿದ್ದ ಕುಷ್ಟಗಿ ಮೂಲದ ಶಶಿಧರ್ (22) ಹಾಗೂ ಮಂಜುನಾಥ್ (22) ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಬಸವರಾಜ್ (21) ಎಂಬಾತನನ್ನು ಹಿರಿಯೂರು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಮೃತಪಟ್ಟಿದ್ದಾನೆ. ಕಾರಿನಲ್ಲಿದ್ದ ಉಳಿದ ಇಬ್ಬರು ಗಾಯಗೊಂಡಿದ್ದು, ಅವರನ್ನು ಹಿರಿಯೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ಉಡುಪಿ: 18 ವರ್ಷಗಳಿಂದ ಕೋರ್ಟ್‌ಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಅರೆಸ್ಟ್
ಲಾರಿಯ ಟೈರ್ ಸ್ಫೋಟಗೊಂಡು ಇದ್ದಕ್ಕಿದ್ದಂತೆ ಎಡಕ್ಕೆ ತಿರುಗಿದ ಕಾರಣ, ಹಿಂದೆಯೇ ಬರುತ್ತಿದ್ದ ಸ್ವಿಫ್ಟ್ ಕಾರು ಲಾರಿಗೆ ಡಿಕ್ಕಿ ಹೊಡೆದಿದ್ದರಿಂದ ಈ ಅವಘಡ ಸಂಭವಿಸಿದೆ. ಈ ಘಟನೆಗೆ ಸಂಬಂಧಿಸಿದಂತೆ ಹಿರಿಯೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಕೇಂದ್ರದಿಂದ 2 ಮಹತ್ವದ ನಿರ್ಧಾರ; ಸಾರಿಗೆಗೆ ಹೊಸ ಪ್ರಾಧಿಕಾರ, ಸಣ್ಣ ಉದ್ಯಮಗಳಿಗೆ 10 ಸಾವಿರ ಕೋಟಿ ರೂ. ನಿಧಿ




