ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಕರ್ನಾಟಕ

ಮಾಲೂರು ಶಾಸಕ ಕೆ.ವೈ.ನಂಜೇಗೌಡ ವಿರುದ್ಧದ ಇಡಿ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್

– ಇಡಿ ಪ್ರಕರಣದಲ್ಲಿ ಶಾಸಕನಿಗೆ‌ ಕ್ಲೀನ್‌ಚಿಟ್ ಕೊಟ್ಟ ಧಾರವಾಡ ವಿಭಾಗೀಯ ಪೀಠ ಕೋಲಾರ: ಮಾಲೂರು ಕಾಂಗ್ರೆಸ್ ಶಾಸಕ ಕೆ.ವೈ.ನಂಜೇಗೌಡಗೆ (K.Y.Nanjegowda) ಧಾರವಾಡ ವಿಭಾಗೀಯ ಪೀಠ ಬಿಗ್ ರಿಲೀಫ್ ಕೊಟ್ಟಿದೆ. ಭ್ರಷ್ಟಾಚಾರ ಸ...

· ಕೋಲಾರ
ಮಾಲೂರು ಶಾಸಕ ಕೆ.ವೈ.ನಂಜೇಗೌಡಗೆ ಬಿಗ್ ರಿಲೀಫ್
ಹಂಚಿಕೊಳ್ಳಿ:

ಕೋಮುಲ್ ನೇಮಕಾತಿ ಅಕ್ರಮ ಆರೋಪದ ಹಿನ್ನೆಲೆಯಲ್ಲಿ ಮಾಲೂರು ಶಾಸಕ ಕೆ.ವೈ.ನಂಜೇಗೌಡ ಅವರ ವಿರುದ್ಧ ಜಾರಿ ನಿರ್ದೇಶನಾಲಯ ದಾಖಲಿಸಿದ್ದ ಪ್ರಕರಣಕ್ಕೆ ಹೈಕೋರ್ಟ್‌ನ ಧಾರವಾಡ ವಿಭಾಗೀಯ ಪೀಠ ತೆರೆ ಎಳೆದಿದೆ. ನ್ಯಾಯಮೂರ್ತಿ ಎಂ.ಐ ಅರುಣ್ ಅವರು ಶಾಸಕರ ಪರವಾಗಿ ತೀರ್ಪು ನೀಡಿದ್ದು ಇಡಿ ಕ್ರಮವನ್ನು ರದ್ದುಪಡಿಸಿದ್ದಾರೆ. ಈ ಹಿಂದೆ 2024ರ ಜನವರಿ 20ರಂದು ನಂಜೇಗೌಡರ ನಿವಾಸದ ಮೇಲೆ ದಾಳಿ ನಡೆಸಿದ್ದ ಅಧಿಕಾರಿಗಳು ಆಸ್ತಿ ಹಾಗೂ ನಗದು ಜಪ್ತಿ ಮಾಡಿದ್ದರು. ನೇಮಕಾತಿ ಪ್ರಕರಣದಲ್ಲಿ ಭ್ರಷ್ಟಾಚಾರ ನಡೆದಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದ್ದು ಇಡಿ ಅಧಿಕಾರಿಗಳು ಮುಂದಿನ ಕಾನೂನು ಕ್ರಮಕ್ಕೆ ಸುಪ್ರೀಂ ಕೋರ್ಟ್ ಮೊರೆ ಹೋಗುವ ಸಾಧ್ಯತೆಯಿದೆ.

ಹಂಚಿಕೊಳ್ಳಿ: