ಮಾನ್ವಿ: ಅಪಘಾತಕ್ಕೀಡಾದ ಲಾರಿಯಲ್ಲಿದ್ದ ಈರುಳ್ಳಿ ದೋಚಿದ ಸ್ಥಳೀಯರು
ರಾಯಚೂರು: ಜಿಲ್ಲೆಯ ಮಾನ್ವಿ (Manvi) ತಾಲೂಕಿನ ಕಪಗಲ್ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿದ ಈರುಳ್ಳಿ ಸಾಗಣೆ ಲಾರಿಯೊಂದು ರಸ್ತೆ ಬದಿಯ ಗುಂಡಿಗೆ ಉರುಳಿ ಬಿದ್ದಿದೆ. ಗ್ರಾಮದ ತಿರುವಿನಲ್ಲಿ ಸಂಭವಿಸಿದ ಈ ಅಪಘಾತದಲ್ಲಿ ಲ...

ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಗ್ರಾಮದ ಬಳಿ ಈರುಳ್ಳಿ ತುಂಬಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹಳ್ಳಕ್ಕೆ ಉರುಳಿದೆ. ಈ ದುರ್ಘಟನೆಯಲ್ಲಿ ಲಾರಿ ಚಾಲಕ ಹಾಗೂ ಕ್ಲೀನರ್ ಗಾಯಗೊಂಡಿದ್ದು, ಅವರನ್ನು ರಕ್ಷಿಸುವ ಬದಲು ಸ್ಥಳೀಯರು ಈರುಳ್ಳಿ ಚೀಲಗಳನ್ನು ಕದಿಯಲು ಮುಗಿಬಿದ್ದಿದ್ದಾರೆ. ಸುಮಾರು 15 ರಿಂದ 20 ನಿಮಿಷಗಳ ಅವಧಿಯಲ್ಲಿ ಲಾರಿಯಲ್ಲಿದ್ದ ಸಂಪೂರ್ಣ ಈರುಳ್ಳಿಯನ್ನು ಜನರು ಹೊತ್ತೊಯ್ದಿದ್ದಾರೆ. ಗಾಯಾಳುಗಳಿಗೆ ಸಹಾಯ ಮಾಡದೆ ಈರುಳ್ಳಿ ಲೂಟಿ ಮಾಡಿದ ಜನರ ವರ್ತನೆ ಈಗ ಟೀಕೆಗೆ ಗುರಿಯಾಗಿದೆ. ಮಾನ್ವಿ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣದ ಪರಿಶೀಲನೆ ನಡೆಸಿದ್ದಾರೆ.




