ಮುಖ್ಯ ವಿಷಯಕ್ಕೆ ಹೋಗಿ
The Karnataka Today
12 Oct
ಸುದ್ದಿ
ಕರ್ನಾಟಕ

ಮಹಾಲಯ ಅಮಾವಾಸ್ಯೆ ರಜೆಯಿಂದ ಮಂಡ್ಯದ ಶಾಲೆಯಲ್ಲಿ ತಪ್ಪಿದ ಅನಾಹುತ!

ಮಂಡ್ಯ: ಸರ್ಕಾರಿ ಪ್ರಾಥಮಿಕ ಶಾಲೆಯೊಂದರಲ್ಲಿ ಇಂದು ಮಧ್ಯಾಹ್ನ ಸಂಭವಿಸಿದ ಅಗ್ನಿ ಅವಘಡದಲ್ಲಿ (Fire Accident) ಶಾಲೆಯ ಎರಡು ಕೊಠಡಿಯಲ್ಲಿದ್ದ ಪೀಠೋಪಕರಣಗಳು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿರುವ ಘಟನೆ ಮಂಡ್ಯ ಜಿಲ್ಲೆ...

· ಮಂಡ್ಯ
ಮಹಾಲಯ ಅಮಾವಾಸ್ಯೆ ರಜೆಯಿಂದ ಮಂಡ್ಯದ ಶಾಲೆಯಲ್ಲಿ ತಪ್ಪಿದ ಅನಾಹುತ!
ಹಂಚಿಕೊಳ್ಳಿ:

ಮಂಡ್ಯ: ಸರ್ಕಾರಿ ಪ್ರಾಥಮಿಕ ಶಾಲೆಯೊಂದರಲ್ಲಿ ಇಂದು ಮಧ್ಯಾಹ್ನ ಸಂಭವಿಸಿದ ಅಗ್ನಿ ಅವಘಡದಲ್ಲಿ (Fire Accident) ಶಾಲೆಯ ಎರಡು ಕೊಠಡಿಯಲ್ಲಿದ್ದ ಪೀಠೋಪಕರಣಗಳು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿರುವ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಕೆನ್ನಾಳು ಗ್ರಾಮದಲ್ಲಿ ಜರುಗಿದೆ.

ಮಹಾಲಯ ಅಮಾವಾಸ್ಯೆಯ ಪ್ರಯುಕ್ತ ಇಂದು ಶಾಲೆಗೆ ರಜೆ ಇದ್ದ ಕಾರಣ, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಒಂದು ವೇಳೆ ಎಂದಿನಂತೆ ಶಾಲೆ (School) ತೆರೆದಿದ್ದರೇ ಭಾರೀ ದೊಡ್ಡ ಅನಾಹುತವೇ ಜರುಗುತ್ತಿತ್ತು ಎಂದು ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.

ಇಂದು ಮಧ್ಯಾಹ್ನ ಕೆನ್ನಾಳು ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಒಂದು ಕೊಠಡಿಯಲ್ಲಿ ಹಠಾತ್ತನೆ ಬೆಂಕಿ ಕಾಣಿಸಿಕೊಂಡಿದೆ. ಕ್ಷಣಾರ್ಧದಲ್ಲಿಯೇ ಬೆಂಕಿಯ ಕೆನ್ನಾಲಿಗೆ ಪಕ್ಕದ ಮತ್ತೊಂದು ಕೊಠಡಿಗೂ ವ್ಯಾಪಿಸಿದೆ. ನೋಡನೋಡುತ್ತಿದ್ದಂತೆ ಕೊಠಡಿಯಲ್ಲಿದ್ದ ಬೆಂಕಿ ಹಾಗೂ ದಟ್ಟ ಹೊಗೆ ಆವರಿಸಿಕೊಂಡಿದ್ದು, ಕೊಠಡಿಯಲ್ಲಿದ್ದ ಮೇಜು, ಕುರ್ಚಿ ಹಾಗೂ ಇತರೆ ಪ್ರಮುಖ ಪೀಠೋಪಕರಣಗಳು ಬೆಂಕಿಗಾಹುತಿಯಾಗಿ ಭಸ್ಮವಾಗಿವೆ.

ಕೂಡಲೇ ಎಚ್ಚೆತ್ತ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಸಕಾಲದಲ್ಲಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ವಿದ್ಯುತ್ ಶಾರ್ಟ್‌ಸರ್ಕ್ಯೂಟ್‌ನಿಂದ ಈ ಅಗ್ನಿ ಅವಘಡ ಸಂಭವಿಸಿರಬಹುದು ಎಂದು ಪ್ರಾಥಮಿಕವಾಗಿ ಶಂಕಿಸಲಾಗಿದೆ. ಈ ಕುರಿತು ಪಾಂಡವಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮತ್ತು ಇಲಾಖಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಹಂಚಿಕೊಳ್ಳಿ: