ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಕರ್ನಾಟಕ

ಮೈಸೂರು: ಸಿಎಂ ಸಿದ್ದರಾಮಯ್ಯ ಅವರಿಗೆ ಬ್ಲ್ಯಾಕ್‌ಮೇಲ್ ಯತ್ನ, ಕಾಂಗ್ರೆಸ್‌ನವರೇ ಭಾಗಿ

ಮೈಸೂರು: ಸಿದ್ದರಾಮಯ್ಯ ಅವರಿಗೆ ಬ್ಲ್ಯಾಕ್‌ಮೇಲ್ ಮಾಡುವ ಯತ್ನ ನಡೆದಿದೆ. ಸ್ಟಿಂಗ್ ಪ್ರಕರಣದಲ್ಲಿ ನಮ್ಮ ಪಕ್ಷದವರೇ ಇದ್ದಾರೆ ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ನೀಡಿದ್ದಾರೆ.ಸ್ಟಿಂಗ್ ಪ್ರಕರಣದ ಬಗ್ಗೆ...

· ಮೈಸೂರು
ಪುತ್ತೂರು ಟಿಕೆಟ್ ಪಡೆಯಲು ಬ್ಲ್ಯಾಕ್‌ಮೇಲ್‌ ಯತ್ನ: ಸಿದ್ದರಾಮಯ್ಯ ಸ್ಟಿಂಗ್ ನಲ್ಲಿ ಕಾಂಗ್ರೆಸ್ ನವರ ಕೈವಾಡ; ಯತೀಂದ್ರ ಹೊಸ ಬಾಂಬ್
ಹಂಚಿಕೊಳ್ಳಿ:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವರ್ಚಸ್ಸಿಗೆ ಧಕ್ಕೆ ತರುವ ಉದ್ದೇಶದಿಂದ ಸ್ಟಿಂಗ್ ಆಪರೇಷನ್ ಮೂಲಕ ಬ್ಲ್ಯಾಕ್‌ಮೇಲ್ ಮಾಡಲು ಯತ್ನಿಸಲಾಗಿದೆ ಎಂದು ಯತೀಂದ್ರ ಸಿದ್ದರಾಮಯ್ಯ ಮೈಸೂರಿನಲ್ಲಿ ಆರೋಪಿಸಿದ್ದಾರೆ. ಈ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷದ ಓರ್ವ ಮಹಿಳೆ ಹಾಗೂ ಮಾಧ್ಯಮ ಮುಖ್ಯಸ್ಥರು ಭಾಗಿಯಾಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ ಎಂದು ಅವರು ತಿಳಿಸಿದ್ದಾರೆ. ಪುತ್ತೂರು ಟಿಕೆಟ್ ಪಡೆಯುವ ಸಲುವಾಗಿ ಈ ಕೃತ್ಯ ಎಸಗಲಾಗಿದೆ ಎಂದು ಶಂಕಿಸಲಾಗಿದ್ದು, ಈಗಾಗಲೇ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ತನಿಖೆ ಸರಿಯಾಗಿ ನಡೆಯದಿದ್ದರೆ ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸುವುದಾಗಿ ಯತೀಂದ್ರ ಸ್ಪಷ್ಟಪಡಿಸಿದ್ದಾರೆ.

ಹಂಚಿಕೊಳ್ಳಿ: