ಮುಖ್ಯ ವಿಷಯಕ್ಕೆ ಹೋಗಿ
The Karnataka Today
8 Oct
ಸುದ್ದಿ
ಕರ್ನಾಟಕ

ಮನ್‌ಮುಲ್ ನಂದಿನಿ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಮಾಜಿ ಅಧ್ಯಕ್ಷ ಉಮ್ಮಡಹಳ್ಳಿ ಶಿವಪ್ಪ ಬಂಧನ!

ಮಂಡ್ಯ: ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿರುವ ಮಂಡ್ಯದ ಮನ್‌ಮುಲ್ (Manmul) ನಂದಿನಿ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದ್ದು, ಒಕ್ಕೂಟದ ಮಾಜಿ ಅಧ್ಯಕ್ಷ ಉಮ್ಮಡಹಳ್ಳಿ ಶಿವಪ್...

· ಮಂಡ್ಯ
ಮನ್‌ಮುಲ್ ನಂದಿನಿ ಹಾಲಿನ ಪುಡಿ ಕಲಬೆರಕೆ ಕೇಸ್‌ – ಮಾಜಿ ಅಧ್ಯಕ್ಷ ಉಮ್ಮಡಹಳ್ಳಿ ಶಿವಪ್ಪ ಅರೆಸ್ಟ್
ಹಂಚಿಕೊಳ್ಳಿ:

ಮಂಡ್ಯ: ರಾಜ್ಯಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿರುವ ಮಂಡ್ಯದ ಮನ್‌ಮುಲ್ (Manmul) ನಂದಿನಿ ಹಾಲಿನ ಪುಡಿ ಕಲಬೆರಕೆ ಪ್ರಕರಣದಲ್ಲಿ ಮಹತ್ವದ ತಿರುವು ಸಿಕ್ಕಿದ್ದು, ಒಕ್ಕೂಟದ ಮಾಜಿ ಅಧ್ಯಕ್ಷ ಉಮ್ಮಡಹಳ್ಳಿ ಶಿವಪ್ಪ (Ummadahalli Shivappa) ಅವರನ್ನು ಮದ್ದೂರು ಪೊಲೀಸರು ನಿನ್ನೆ ತಡರಾತ್ರಿ ವಶಕ್ಕೆ ಪಡೆದು ಬಂಧಿಸಿದ್ದಾರೆ.

ಈ ಪ್ರಕರಣದಲ್ಲಿ ಶಿವಪ್ಪ ಅವರ ಕೈವಾಡವಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದ ಹಿನ್ನೆಲೆಯಲ್ಲಿ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ. ಇಂದು ಆರೋಪಿಯನ್ನು ಮದ್ದೂರು ನ್ಯಾಯಾಲಯದ ಮುಂದೆ ಹಾಜರುಪಡಿಸುವ ಸಾಧ್ಯತೆಗಳಿವೆ. ಇದನ್ನೂ ಓದಿ: ಶಿಕ್ಷಣ ಕ್ಷೇತ್ರದ ಸೇವೆಗೆ ಗೌರವದ ಗರಿ: ಪ್ರಾಚಾರ್ಯ ರತ್ನ ಪ್ರೊ. ಶ್ರೀಕಂಠಯ್ಯ ಅವರಿಗೆ ಸನ್ಮಾನ

ಮುಖಾಮುಖಿ ವಿಚಾರಣೆ ವೇಳೆ ಬಯಲಾಯ್ತು ಸತ್ಯ

ಪ್ರಕರಣದ ಪ್ರಮುಖ ಆರೋಪಿ (A1) ಪ್ರದೀಪ್ ಕುಮಾರ್ ಜಾದವ್, ನಿರ್ದೇಶಕರೊಬ್ಬರೊಂದಿಗೆ ನಡೆಸಿದ್ದಾರೆ ಎನ್ನಲಾದ ಆಡಿಯೋ ಸಂಭಾಷಣೆಯಲ್ಲಿ ಈ ಅಕ್ರಮದಲ್ಲಿ ಶಿವಪ್ಪ ಭಾಗಿಯಾಗಿರುವ ಬಗ್ಗೆ ಉಲ್ಲೇಖಿಸಲಾಗಿತ್ತು. ಈ ಸಾಕ್ಷ್ಯವನ್ನು ಆಧರಿಸಿ ಪೊಲೀಸರು ನ್ಯಾಯಾಂಗ ಬಂಧನದಲ್ಲಿದ್ದ ಜಾದವ್‌ನನ್ನು ಮತ್ತೆ ಪೊಲೀಸ್ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಿದ್ದರು.

ನಂತರ ಜಾದವ್ ಹಾಗೂ ಮಾಜಿ ಅಧ್ಯಕ್ಷ ಶಿವಪ್ಪ ಇಬ್ಬರನ್ನೂ ಎದುರುಬದುರು ಕೂರಿಸಿ ವಿಚಾರಣೆ ನಡೆಸಲಾಯಿತು. ಈ ಸಂದರ್ಭದಲ್ಲಿ ಜಾದವ್ ನೇರವಾಗಿ ಶಿವಪ್ಪ ಅವರ ಮೇಲೆ ಅಕ್ರಮದ ಆರೋಪಗಳನ್ನು ಮಾಡಿದ್ದು, ಇಬ್ಬರ ನಡುವೆ ತೀವ್ರ ವಾಗ್ವಾದವೂ ನಡೆದಿದೆ. ವಿಚಾರಣೆ ವೇಳೆ ಶಿವಪ್ಪ ಅವರ ಪಾತ್ರದ ಬಗ್ಗೆ ಖಚಿತ ಮಾಹಿತಿ ಸಿಗುತ್ತಿದ್ದಂತೆಯೇ ಪೊಲೀಸರು ಅವರನ್ನು ವಶಕ್ಕೆ ಪಡೆದು ಬಂಧಿಸಿದ್ದಾರೆ. ಇದನ್ನೂ ಓದಿ: ಕೆಆರ್‌ಎಸ್ ಬಳಿ ನಡೆಯುವ ಕಾವೇರಿ ಆರತಿ ಮುಂದೂಡಿಕೆ

ಈ ಪ್ರಕರಣದಲ್ಲಿ ಈಗಾಗಲೇ ಪ್ರದೀಪ್ ಕುಮಾರ್ ಜಾದವ್ ಸೇರಿದಂತೆ ಐದು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಇದೀಗ ಮಾಜಿ ಅಧ್ಯಕ್ಷ ಶಿವಪ್ಪ ಅವರ ಬಂಧನದೊಂದಿಗೆ ಈ ಪ್ರಕರಣದಲ್ಲಿ ಬಂಧಿತರಾದವರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ಪ್ರಕರಣದ ತನಿಖೆ ಮುಂದುವರಿದಿದ್ದು, ಇನ್ನೂ ಹಲವರನ್ನು ವಿಚಾರಣೆಗೆ ಒಳಪಡಿಸುವ ಸಾಧ್ಯತೆಗಳಿವೆ.

ಹಂಚಿಕೊಳ್ಳಿ: