ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಕರ್ನಾಟಕ

ಮಂಡ್ಯ: ಅ.23ರಂದು ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ವೇ ತಡೆದು ರೈತರ ಬೃಹತ್ ಪ್ರತಿಭಟನೆ

ಮಂಡ್ಯ: ಕಬ್ಬಿಗೆ ಸೂಕ್ತ ಬೆಲೆ ನಿಗದಿ ಮಾಡಬೇಕು, ರೈತರ ಸಾಲ ಮನ್ನಾ ಮಾಡಬೇಕು ಎಂಬ ಬೇಡಿಕೆ ಮುಂದಿಟ್ಟುಕೊಂಡು ಕರ್ನಾಟಕ ರೈತಸಂಘ ಅ. 23ರಂದು ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ವೇ ಬಂದ್‌ಗೆ ಕರೆ ನೀಡಿದೆ. ಮಂಡ್ಯ ಜಿಲ್ಲೆಯ...

· ಮಂಡ್ಯ
ಮಂಡ್ಯ | ಅ.23ರಂದು ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ವೇ ಬಂದ್‌ – 5 ಸಾವಿರಕ್ಕೂ ಹೆಚ್ಚು ರೈತರಿಂದ ಪ್ರತಿಭಟನೆ!
ಹಂಚಿಕೊಳ್ಳಿ:

ಕಬ್ಬಿನ ಬೆಲೆ ಹೆಚ್ಚಳ ಹಾಗೂ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ ಕರ್ನಾಟಕ ರೈತಸಂಘವು ಅಕ್ಟೋಬರ್ 23ರಂದು ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ವೇ ಬಂದ್‌ಗೆ ಕರೆ ನೀಡಿದೆ. ಶ್ರೀರಂಗಪಟ್ಟಣ ತಾಲೂಕಿನ ಗಣಂಗೂರು ಟೋಲ್ ಬಳಿ ಬಡಗಲಪುರ ನಾಗೇಂದ್ರ ಅವರ ನೇತೃತ್ವದಲ್ಲಿ 5 ಸಾವಿರಕ್ಕೂ ಹೆಚ್ಚು ರೈತರು ಜಮಾಯಿಸಿ ಪ್ರತಿಭಟನೆ ನಡೆಸಲಿದ್ದಾರೆ. ಪ್ರತಿ ಟನ್ ಕಬ್ಬಿಗೆ 5,500 ರೂಪಾಯಿ ನಿಗದಿಪಡಿಸಬೇಕು ಹಾಗೂ ಬಾಕಿ ಹಣವನ್ನು ತಕ್ಷಣ ಪಾವತಿಸಬೇಕೆಂದು ಸಂಘವು ಸರ್ಕಾರವನ್ನು ಒತ್ತಾಯಿಸಿದೆ. ಬರಗಾಲದ ಸಂಕಷ್ಟದಲ್ಲಿರುವ ರೈತರ ಸಾಲವನ್ನು ಮನ್ನಾ ಮಾಡದಿದ್ದರೆ ಹೋರಾಟವನ್ನು ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಲಾಗಿದ್ದು, ಅಂದು ಸಂಚರಿಸುವ ವಾಹನ ಸವಾರರು ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಸೂಚಿಸಲಾಗಿದೆ.

ಹಂಚಿಕೊಳ್ಳಿ: