ಮುಖ್ಯ ವಿಷಯಕ್ಕೆ ಹೋಗಿ
The Karnataka Today
12 Oct
ಸುದ್ದಿ
ಕರ್ನಾಟಕ

ಮಂಡ್ಯ ಎಎಸ್‌ಪಿ ಸಿ.ಇ.ತಿಮ್ಮಯ್ಯ ನಿಧನ

ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ASP) ಸಿ.ಇ.ತಿಮ್ಮಯ್ಯ (57) ಅವರು ಇಂದು ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮಂಡ್ಯದ (Mandya)...

· ಮಂಡ್ಯ
ಮಂಡ್ಯ ಎಎಸ್‌ಪಿ ಸಿ.ಇ.ತಿಮ್ಮಯ್ಯ ನಿಧನ
ಹಂಚಿಕೊಳ್ಳಿ:

ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ASP) ಸಿ.ಇ.ತಿಮ್ಮಯ್ಯ (57) ಅವರು ಇಂದು ನಿಧನರಾಗಿದ್ದಾರೆ.

ಕಳೆದ ಕೆಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮಂಡ್ಯದ  (Mandya) ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ.

ಕಳೆದ ಮೂರು ವರ್ಷಗಳಿಂದ ಮಂಡ್ಯ ಜಿಲ್ಲೆಯಲ್ಲಿ ಅಪರ ಪೊಲೀಸ್ ಅಧೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ತಿಮ್ಮಯ್ಯ ಅವರು ಕರ್ತವ್ಯನಿಷ್ಠ ಅಧಿಕಾರಿಯಾಗಿ ಹೆಸರುವಾಸಿಯಾಗಿದ್ದರು. ಜಿಲ್ಲೆಯಲ್ಲಿ ನಡೆದ ಶ್ರೀರಂಗಪಟ್ಟಣದ ಹನುಮ ಸಂಕೀರ್ತನಾ ಯಾತ್ರೆ, ಗಣಪತಿ ವಿಸರ್ಜನಾ ಗಲಾಟೆ, ಕೆರಗೋಡು ಧ್ವಜ ವಿವಾದ ಹಾಗೂ ಸಾರ್ವತ್ರಿಕ ಚುನಾವಣೆಗಳಂತಹ ಅತ್ಯಂತ ಸೂಕ್ಷ್ಮ ಸನ್ನಿವೇಶಗಳಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಮೃತ ಅಧಿಕಾರಿಯ ಪಾರ್ಥಿವ ಶರೀರವನ್ನು ಮಂಡ್ಯದಲ್ಲಿ ಸಾರ್ವಜನಿಕರು ಹಾಗೂ ಪೊಲೀಸ್ ಸಿಬ್ಬಂದಿಯ ಅಂತಿಮ ದರ್ಶನಕ್ಕೆ ಇರಿಸಲು ವ್ಯವಸ್ಥೆ ಮಾಡಲಾಗಿದೆ. ನಂತರ ಮೈಸೂರಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅವರ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ಹಾಗೂ ಪೊಲೀಸ್ ಇಲಾಖೆ ತಿಳಿಸಿದೆ.

ಅಧಿಕಾರಿಯ ಅಕಾಲಿಕ ನಿಧನಕ್ಕೆ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಹಂಚಿಕೊಳ್ಳಿ: