ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಕರ್ನಾಟಕ

ಮಂಡ್ಯ: ಕೆಆರ್‌ಎಸ್ ಅಣೆಕಟ್ಟೆಯಲ್ಲಿ 98 ಅಡಿಗೆ ಕುಸಿದ ನೀರಿನ ಮಟ್ಟ, ತಮಿಳುನಾಡಿಗೆ ನೀರು ಬಿಡುಗಡೆ

– ಇಂದಿನಿಂದ ತಮಿಳುನಾಡಿಗೆ ನಿತ್ಯ 3,000 ಕ್ಯೂಸೆಕ್‌ ನೀರು ಮಂಡ್ಯ: ಮಳೆಯ ಕೊರತೆ ಮತ್ತು ತಮಿಳುನಾಡಿಗೆ ನಿರಂತರವಾಗಿ ನೀರು ಹರಿಸುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಜಲಾಶಯದ ನೀರಿನ ಮ...

· ಮಂಡ್ಯ
10 ದಿನಗಳಲ್ಲಿ 6 ಅಡಿ ಕುಸಿತ, 98 ಅಡಿಗೆ ಇಳಿದ ಕೆಆರ್‌ಎಸ್ ನೀರಿನ ಮಟ್ಟ – ಸಂಕಷ್ಟದಲ್ಲಿ ಅನ್ನದಾತ
ಹಂಚಿಕೊಳ್ಳಿ:

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕೆಆರ್‌ಎಸ್ ಜಲಾಶಯದ ನೀರಿನ ಸಂಗ್ರಹ ಗಣನೀಯವಾಗಿ ಇಳಿಕೆಯಾಗಿದೆ. ಕಳೆದ ಹತ್ತು ದಿನಗಳಲ್ಲಿ ನೀರಿನ ಮಟ್ಟ 104 ಅಡಿಯಿಂದ 98 ಅಡಿಗೆ ತಲುಪಿದ್ದು, ಪ್ರಸ್ತುತ 21.689 ಟಿಎಂಸಿ ನೀರು ಮಾತ್ರ ಲಭ್ಯವಿದೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶದಂತೆ ಇಂದಿನಿಂದ 15 ದಿನಗಳ ಕಾಲ ತಮಿಳುನಾಡಿಗೆ ಪ್ರತಿದಿನ 3,000 ಕ್ಯೂಸೆಕ್ ನೀರನ್ನು ಹರಿಸಲಾಗುತ್ತಿದೆ. ಜಲಾಶಯಕ್ಕೆ ಕೇವಲ 608 ಕ್ಯೂಸೆಕ್ ಒಳಹರಿವು ಇದ್ದು, ಹೊರಹರಿವು 3,480 ಕ್ಯೂಸೆಕ್ ಇರುವುದರಿಂದ ಕಾವೇರಿ ಕಣಿವೆಯ ರೈತರಿಗೆ ನೀರಿನ ಅಭಾವದ ಭೀತಿ ಎದುರಾಗಿದೆ.

ಹಂಚಿಕೊಳ್ಳಿ: