ಮಂಡ್ಯದ ಕೆಆರ್‌ಎಸ್ ಜಲಾಶಯಕ್ಕೆ 4,918 ಕ್ಯೂಸೆಕ್ ಒಳಹರಿವು: 101.26 ಅಡಿಗೆ ಏರಿದ ನೀರಿನ ಮಟ್ಟ
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾದ ಹಿನ್ನೆಲೆ ಕೆಆರ್‌ಎಸ್ ಜಲಾಶಯದಲ್ಲಿ (KRS Dam) ಒಳ ಹರಿವು ಹೆಚ್ಚಳವಾಗಿದೆ. ಮಂಡ್ಯ (Mandya) ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕೃಷ್ಣರಾಜಸಾಗರ ಜಲಾಶಯದಲ್...

ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕೃಷ್ಣರಾಜಸಾಗರ ಜಲಾಶಯಕ್ಕೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಸುರಿದ ಮಳೆಯಿಂದಾಗಿ ನೀರಿನ ಒಳಹರಿವು ಹೆಚ್ಚಾಗಿದೆ. ಸದ್ಯ ಅಣೆಕಟ್ಟೆಗೆ 4,918 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ಜಲಾಶಯದ ನೀರಿನ ಮಟ್ಟ 101.26 ಅಡಿಗೆ ತಲುಪಿದೆ. 49.452 ಟಿಎಂಸಿ ಗರಿಷ್ಠ ಸಾಮರ್ಥ್ಯವಿರುವ ಜಲಾಶಯದಲ್ಲಿ ಈಗ 23.814 ಟಿಎಂಸಿ ನೀರು ಸಂಗ್ರಹವಾಗಿದೆ. ಒಳಹರಿವು ಹೆಚ್ಚಾಗಿರುವುದರಿಂದ ಮಂಡ್ಯ ಜಿಲ್ಲೆಯ ರೈತರಲ್ಲಿ ಸಂತಸ ಮನೆಮಾಡಿದೆ.




