ಮಂಡ್ಯದ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮಕ್ಕೆ ಸಿಎಂ ಡಿ.ಕೆ.ಶಿವಕುಮಾರ್ ಚಾಲನೆ
ಮಂಡ್ಯ: ವಾರಣಾಸಿಯ ಗಂಗಾರತಿಯ ಮಾದರಿಯಲ್ಲೇ ಕರ್ನಾಟಕದಲ್ಲೂ ಕಾವೇರಿ ನದಿಗೆ ಪೂಜೆ ಸಲ್ಲಿಸುವ ಮಹತ್ವಾಕಾಂಕ್ಷೆಯ ಕಾವೇರಿ ಆರತಿ ಕಾರ್ಯಕ್ರಮದ ಎರಡನೇ ವರ್ಷದ ಸಂಭ್ರಮಕ್ಕೆ ಇಂದು ಅಧಿಕೃತ ಚಾಲನೆ ಸಿಕ್ಕಿದೆ. ಕೆಆರ್‌ಎಸ್‌ಗೆ ಆಗ...

ಮಂಡ್ಯದ ಕೆಆರ್‌ಎಸ್ ಬೃಂದಾವನದಲ್ಲಿ ಕಾವೇರಿ ಆರತಿ ಕಾರ್ಯಕ್ರಮದ ಎರಡನೇ ವರ್ಷದ ಆಚರಣೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಧಿಕೃತವಾಗಿ ಚಾಲನೆ ನೀಡಿದರು. ವಾರಣಾಸಿಯ ಗಂಗಾರತಿಯ ಮಾದರಿಯಲ್ಲಿ ಮೋಹನ್ ಮಿಶ್ರಾ ನೇತೃತ್ವದ 15 ಮಂದಿ ವೈದಿಕರ ತಂಡವು ಕಾವೇರಿ ಮಾತೆಗೆ ವಿಶೇಷ ಪೂಜೆ ಸಲ್ಲಿಸಿತು. ಈ ಸಂದರ್ಭದಲ್ಲಿ ಸಿಎಂ ಪತ್ನಿ ಉಷಾ, ಸುತ್ತೂರು ಶ್ರೀಗಳು, ನಿಶ್ಚಲಾನಂದನಾಥ ಸ್ವಾಮಿ, ಸೋಮನಾಥ ಸ್ವಾಮೀಜಿ, ಸಚಿವ ಚಲುವರಾಯಸ್ವಾಮಿ, ನರೇಂದ್ರಸ್ವಾಮಿ ಹಾಗೂ ಶಾಸಕ ರಮೇಶ್ ಬಂಡೀಸಿದ್ದೇಗೌಡ ಉಪಸ್ಥಿತರಿದ್ದರು. ಕಾವೇರಿ ನದಿಯ ಮಹತ್ವವನ್ನು ಸ್ಮರಿಸಿದ ಸಿಎಂ, ನೀರನ್ನು ಉಳಿಸಿಕೊಳ್ಳುವುದು ನಮ್ಮ ಸಂಸ್ಕೃತಿಯ ಭಾಗ ಎಂದು ತಿಳಿಸಿದರು.




