ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಕರ್ನಾಟಕ

ಮಂಗಳೂರಿನಲ್ಲಿ ಮಡಗಾಂವ್-ಬೆಂಗಳೂರು ವಂದೇ ಭಾರತ್ ರೈಲಿಗೆ ಚಾಲನೆ ನೀಡಿದ ಅಶ್ವಿನಿ ವೈಷ್ಣವ್

ಮಂಗಳೂರು: ಮಡಗಾಂವ್- ಬೆಂಗಳೂರು ವಂದೇ ಭಾರತ್ ರೈಲಿಗೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಇಲ್ಲಿನ ಮಂಗಳೂರು ಜಂಕ್ಷನ್ ನಿಲ್ದಾಣದಲ್ಲಿ ಶುಕ್ರವಾರ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅಶ...

· ದಕ್ಷಿಣ ಕನ್ನಡ
ಮಡಗಾಂವ್–ಬೆಂಗಳೂರು ವಂದೇ ಭಾರತ್ ರೈಲಿಗೆ ಮಂಗಳೂರಿನಲ್ಲಿ ಅಶ್ವಿನಿ ವೈಷ್ಣವ್ ಚಾಲನೆ
ಹಂಚಿಕೊಳ್ಳಿ:

ಮಂಗಳೂರು ಜಂಕ್ಷನ್ ನಿಲ್ದಾಣದಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಶುಕ್ರವಾರ ಮಡಗಾಂವ್-ಬೆಂಗಳೂರು ವಂದೇ ಭಾರತ್ ರೈಲು ಸೇವೆಗೆ ಹಸಿರು ನಿಶಾನೆ ತೋರಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು ಮಂಗಳೂರು ಸೆಂಟ್ರಲ್ ನಿಲ್ದಾಣದ ಅಭಿವೃದ್ಧಿಗೆ 94 ಕೋಟಿ ರೂಪಾಯಿ ಮಂಜೂರು ಮಾಡಿರುವುದಾಗಿ ಘೋಷಿಸಿದರು. ಸಮಾರಂಭದ ನಂತರ ಅವರು ಜನಪ್ರತಿನಿಧಿಗಳೊಂದಿಗೆ ಸುಬ್ರಹ್ಮಣ್ಯ ರೋಡ್‌ವರೆಗೆ ರೈಲಿನಲ್ಲಿ ಪ್ರಯಾಣಿಸಿದರು. ಇದೇ ವೇಳೆ ಸುಬ್ರಹ್ಮಣ್ಯ ರೋಡ್-ಸಕಲೇಶಪುರ ಹಳಿ ವಿದ್ಯುದೀಕರಣ ಯೋಜನೆ ಹಾಗೂ ಅಮೃತ್ ಭಾರತ್ ಯೋಜನೆಯಡಿ ನವೀಕೃತಗೊಂಡ ಸುಬ್ರಹ್ಮಣ್ಯ ರೋಡ್ ನಿಲ್ದಾಣವನ್ನು ಲೋಕಾರ್ಪಣೆ ಮಾಡಲಾಯಿತು.

ಹಂಚಿಕೊಳ್ಳಿ: