ಮೋದಿ, ಶಾ, ಜ್ಞಾನೇಶ್ ಸುತ್ತಲೂ ಕಾನೂನಿನ ಉರುಳು ಬಿಗಿಯಾಗುತ್ತಿದೆ: ರಾಹುಲ್ ಗಾಂಧಿ
ನವದೆಹಲಿ: ದೇಶದ ಸಂವಿಧಾನವನ್ನು ನಾಶಪಡಿಸಿದವರನ್ನು ನ್ಯಾಯಾಂಗ ವಿಚಾರಣೆಗೆ ಒಳಪಡಿಸುವುದು ನಮ್ಮ ಕರ್ತವ್ಯ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಸುತ...

ಸಂವಿಧಾನಕ್ಕೆ ಧಕ್ಕೆ ತಂದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ನಡೆಸುತ್ತಿರುವ ಪ್ರತಿಭಟನೆಯನ್ನು ಮುಂದಿನ ದಿನಗಳಲ್ಲಿ ವಿಸ್ತರಿಸುವ ಕುರಿತು ರಾಹುಲ್ ಗಾಂಧಿ ತಮ್ಮ ನಿವಾಸದಲ್ಲಿ ಇಂಡಿಯಾ ಮೈತ್ರಿಕೂಟದ ನಾಯಕರೊಂದಿಗೆ ಸಮಾಲೋಚನೆ ನಡೆಸಿದರು. ಮಲ್ಲಿಕಾರ್ಜುನ ಖರ್ಗೆ, ಸುಪ್ರಿಯಾ ಸುಳೆ ಸೇರಿದಂತೆ ಹಲವು ನಾಯಕರು ಈ ಸಭೆಯಲ್ಲಿ ಪಾಲ್ಗೊಂಡಿದ್ದು, ಮತ ಕಳವಿನ ವಿರುದ್ಧದ ಹೋರಾಟವನ್ನು ತೀವ್ರಗೊಳಿಸಲು ನಿರ್ಧರಿಸಲಾಗಿದೆ.




