ಮುಖ್ಯ ವಿಷಯಕ್ಕೆ ಹೋಗಿ
The Karnataka Today
13 Oct
ಸುದ್ದಿ
ಕರ್ನಾಟಕ

ಮೋದಿ ವಿರುದ್ಧ ಮಾನಹಾನಿ ಹೇಳಿಕೆ: ರಾಹುಲ್ ಮೇಲಿನ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾನಹಾನಿ ಹೇಳಿಕೆ ನೀಡಿದ್ದಾರೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ವಿಚಾರಣಾ ನ್ಯಾಯಾಲಯದಲ್ಲಿ ನಡೆಯುತ್ತಿರುವ ಮಾನನಷ್ಟ ಮೊಕದ್ದಮೆಯ ಪ್ರಕ್ರಿಯೆಗೆ ಸುಪ್ರೀಂ...

ಮೋದಿ ವಿರುದ್ಧ ಮಾನಹಾನಿ ಹೇಳಿಕೆ: ರಾಹುಲ್ ಮೇಲಿನ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆ
ಹಂಚಿಕೊಳ್ಳಿ:

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾನಹಾನಿ ಹೇಳಿಕೆ ನೀಡಿದ್ದಾರೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ವಿಚಾರಣಾ ನ್ಯಾಯಾಲಯದಲ್ಲಿ ನಡೆಯುತ್ತಿರುವ ಮಾನನಷ್ಟ ಮೊಕದ್ದಮೆಯ ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್‌ ಮಂಗಳವಾರ ತಡೆ ನೀಡಿದೆ.

ನ್ಯಾಯಮೂರ್ತಿಗಳಾದ ವಿಕ್ರಮ್‌ ನಾಥ್‌ ಹಾಗೂ ಅಪರೇಶ್‌ ಕುಮಾರ್‌ ಸಿಂಗ್‌ ಅವರಿದ್ದ ಪೀಠವು ಈ ಸಂಬಂಧ ಮಹಾರಾಷ್ಟ್ರ ಸರ್ಕಾರ ಮತ್ತು ದೂರುದಾರ ಎಂ.ಎಚ್‌. ಶ್ರೀಶ್ರೀಮಲ್‌ ಅವರಿಗೆ ನೋಟಿಸ್‌ ಜಾರಿ ಮಾಡಿದ್ದು, ನಾಲ್ಕು ವಾರಗಳ ಒಳಗೆ ಉತ್ತರಿಸುವಂತೆ ನಿರ್ದೇಶಿಸಿದೆ.

‘ನಾಲ್ಕು ವಾರಗಳಲ್ಲಿ ಉತ್ತರಿಸುವಂತೆ ನೋಟಿಸ್‌ ನೀಡಲಾಗಿದೆ. ಅಲ್ಲಿಯವರೆಗೆ ವಿಚಾರಣಾ ನ್ಯಾಯಾಲಯದಲ್ಲಿನ ಮುಂದಿನ ಪ್ರಕ್ರಿಯೆಗಳಿಗೆ ತಡೆ ಇರಲಿದೆ’ ಎಂದು ಪೀಠ ಆದೇಶಿಸಿತು.

ಸಮನ್ಸ್‌ ರದ್ದುಪಡಿಸಲು ನಿರಾಕರಿಸಿದ್ದ ಬಾಂಬೆ ಹೈಕೋರ್ಟ್‌ನ ಸೆಪ್ಟೆಂಬರ್‌ 8ರ ಆದೇಶವನ್ನು ಪ್ರಶ್ನಿಸಿ ರಾಹುಲ್‌ ಗಾಂಧಿ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ವೇಳೆ ನ್ಯಾಯಾಲಯ ಈ ಆದೇಶ ನೀಡಿದೆ.

ಸೆಪ್ಟೆಂಬರ್‌ 2018ರಲ್ಲಿ ರಾಜಸ್ಥಾನದಲ್ಲಿ ನಡೆದ ರ್‍ಯಾಲಿಯೊಂದರಲ್ಲಿ ಮಾತನಾಡಿದ್ದ ವೇಳೆ ರಾಹುಲ್‌ ಅವರು ಮಾನಹಾನಿ ಹೇಳಿಕೆ ನೀಡಿದ್ದರು ಎಂದು ದೂರುದಾರರು ಆರೋಪಿಸಿದ್ದರು.

ಹಂಚಿಕೊಳ್ಳಿ: