ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಕರ್ನಾಟಕ

ಮುಧೋಳದ ದತ್ತ ಕೆರೆಯಲ್ಲಿ ನಾಪತ್ತೆಯಾಗಿದ್ದ ಆರ್‌ಎಸ್‌ಎಸ್ ಮುಖಂಡ ಪ್ರಮೋದ್ ಮಮದಾಪುರ ಶವ ಪತ್ತೆ

ಬಾಗಲಕೋಟೆ: ಕೆಲ ದಿನಗಳಿಂದ ನಾಪತ್ತೆಯಾಗಿದ್ದ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ದೈಹಿಕ ಪ್ರಮುಖ್ ಒಬ್ಬರು ಮುಧೋಳ ನಗರದ ಕೆರೆಯಲ್ಲಿ(Mudhol Lake) ಶವವಾಗಿ ಪತ್ತೆಯಾಗಿದ್ದಾರೆ. ಮೃತರನ್ನು ಪ್ರಮೋದ್ ಮಮದಾಪುರ (44) ಎಂ...

· ಬಾಗಲಕೋಟೆ
ಆರ್‌ಎಸ್‌ಎಸ್ ದೈಹಿಕ ಪ್ರಮುಖ್ ಮುಧೋಳ ಕೆರೆಯಲ್ಲಿ ಶವವಾಗಿ ಪತ್ತೆ
ಹಂಚಿಕೊಳ್ಳಿ:

ಜಮಖಂಡಿ ಭಾಗದಲ್ಲಿ ಆರ್‌ಎಸ್‌ಎಸ್ ದೈಹಿಕ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ 44 ವರ್ಷದ ಪ್ರಮೋದ್ ಮಮದಾಪುರ ಅವರು ಕೆಲ ದಿನಗಳಿಂದ ಕಾಣೆಯಾಗಿದ್ದರು. ಧಾರ್ಮಿಕ ಅನುಷ್ಠಾನದ ಕಾರಣ ನೀಡಿ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದ ಅವರು, ನಂತರ ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಶುಕ್ರವಾರ ಮುಧೋಳದ ಹೊರವಲಯದಲ್ಲಿರುವ ದತ್ತ ಕೆರೆಯಲ್ಲಿ ಮೃತದೇಹ ಪತ್ತೆಯಾಗಿದ್ದು, ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿರುವ ಮುಧೋಳ ಠಾಣೆಯ ಅಧಿಕಾರಿಗಳು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ಮುಂದುವರಿಸಿದ್ದಾರೆ.

ಹಂಚಿಕೊಳ್ಳಿ: