ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಕರ್ನಾಟಕ

ಮುಧೋಳದಲ್ಲಿ ಆರನೇ ದಿನಕ್ಕೆ ಕಾಲಿಟ್ಟ ಕಬ್ಬು ಬೆಳೆಗಾರರ ಪ್ರತಿಭಟನೆ: 4,200 ರೂ.ಗೆ ಪಟ್ಟು

ಬಾಗಲಕೋಟೆ: ಪ್ರತಿ ಟನ್ ಕಬ್ಬಿಗೆ 4,200 ರೂ. ದರ ಘೋಷಣೆ ಮಾಡಲೇಬೇಕು ಎಂದು ಆಗ್ರಹಿಸಿ ಮುಧೋಳ(Mudhol) ನಗರದಲ್ಲಿ ಕಬ್ಬು ಬೆಳೆಗಾರರು ನಡೆಸುತ್ತಿರುವ ಪ್ರತಿಭಟನೆಯು(Sugarcane Farmers’ Protest) ಆರನೇ ದಿನಕ್ಕೆ ಕಾಲಿ...

· ಬಾಗಲಕೋಟೆ
ಪ್ರತಿ ಟನ್ ಕಬ್ಬಿಗೆ 4,200 ರೂ. ದರಕ್ಕೆ ಪಟ್ಟು: ಮುಧೋಳದಲ್ಲಿ ತೀವ್ರಗೊಂಡ ಅನ್ನದಾತರ ಹೋರಾಟ
ಹಂಚಿಕೊಳ್ಳಿ:

ಮುಧೋಳದಲ್ಲಿ ಪ್ರತಿ ಟನ್ ಕಬ್ಬಿಗೆ 4,200 ರೂ. ಬೆಂಬಲ ಬೆಲೆ ನೀಡಬೇಕೆಂದು ಆಗ್ರಹಿಸಿ ರೈತರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿಯು ಆರನೇ ದಿನಕ್ಕೆ ತಲುಪಿದೆ. ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಜಮಾಯಿಸಿರುವ ಸಾವಿರಾರು ರೈತರು ಮತ್ತು ಮಹಿಳೆಯರು, ತಾಲೂಕು ಆಡಳಿತ ಭವನಕ್ಕೆ ಮುತ್ತಿಗೆ ಹಾಕುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಕ್ಕರೆ ಕಾರ್ಖಾನೆ ಮಾಲೀಕರು ಹಾಗೂ ಸರ್ಕಾರದ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಯುತ್ತಿದ್ದು, ಬೇಡಿಕೆ ಈಡೇರದಿದ್ದರೆ ಹೋರಾಟವನ್ನು ತೀವ್ರಗೊಳಿಸುವುದಾಗಿ ರೈತ ಮುಖಂಡರು ಎಚ್ಚರಿಕೆ ನೀಡಿದ್ದಾರೆ. ಈ ಪ್ರತಿಭಟನೆಗೆ ಸ್ಥಳೀಯ ವ್ಯಾಪಾರಸ್ಥರು, ವಿವಿಧ ಸಂಘಟನೆಗಳು ಹಾಗೂ ಮಠಾಧೀಶರು ಬೆಂಬಲ ವ್ಯಕ್ತಪಡಿಸಿದ್ದಾರೆ.

ಹಂಚಿಕೊಳ್ಳಿ: