ಮುಂಬೈ: ಮರಾಠ ಮೀಸಲಾತಿ ಹೋರಾಟಗಾರನಿಗೆ 500 ಕೋಟಿ ರೂ. ನೀಡಿದ ಆರೋಪದ ತನಿಖೆಗೆ ಸಿಎಂ ಆದೇಶ
ಮುಂಬೈ: ಮರಾಠ ಮೀಸಲಾತಿ ಹೋರಾಟಗಾರ ಮನೋಜ್ ಜಾರಂಗೆ ಅವರು ಬಿಡುಗಡೆ ಮಾಡಿದ ಆಡಿಯೊ ರೆಕಾರ್ಡಿಂಗ್ಸ್ ಕುರಿತು ತನಿಖೆ ನಡೆಸುವುದಾಗಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಶುಕ್ರವಾರ ಭರವಸೆ ನೀಡಿದ್ದಾರೆ.ವೈರಲ್...

ಮರಾಠ ಮೀಸಲಾತಿ ಹೋರಾಟಗಾರ ಮನೋಜ್ ಜಾರಂಗೆ ಅವರಿಗೆ ಸಂಸದ ಶ್ರೀಕಾಂತ್ ಶಿಂಧೆ ಮೂಲಕ 500 ಕೋಟಿ ರೂಪಾಯಿ ಸಂದಾಯವಾಗಿದೆ ಎಂಬ ಆಡಿಯೊ ವೈರಲ್ ಆದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ವಿವಾದ ಉಂಟಾಗಿದೆ. ಈ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸುವುದಾಗಿ ಗೃಹ ಸಚಿವರೂ ಆಗಿರುವ ದೇವೇಂದ್ರ ಫಡಣವೀಸ್ ಭರವಸೆ ನೀಡಿದ್ದಾರೆ. ಶಿವಸೇನೆ ಮತ್ತು ಬಿಜೆಪಿ ನಿಯೋಗಗಳು ಈ ಕುರಿತು ತನಿಖೆ ನಡೆಸುವಂತೆ ಒತ್ತಾಯಿಸಿದ್ದವು. ಆದರೆ ತಾವು ಯಾವುದೇ ಹಣ ಪಡೆದಿಲ್ಲ ಎಂದು ಸ್ಪಷ್ಟಪಡಿಸಿರುವ ಮನೋಜ್ ಜಾರಂಗೆ, ಇದು ಹೋರಾಟವನ್ನು ದಾರಿ ತಪ್ಪಿಸುವ ಸಂಚು ಎಂದು ಪ್ರತಿಕ್ರಿಯಿಸಿದ್ದಾರೆ.




