ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಕರ್ನಾಟಕ

ಮುಂಬೈ: ನಟ ಟೈಗರ್ ಶ್ರಾಫ್ ಕಾರಿನ ಮೇಲೆ ಗುಂಡಿನ ದಾಳಿ, ಇಬ್ಬರಿಗೆ ಗಾಯ

ಮುಂಬೈ: ನಗರದ ಪ್ರತಿಷ್ಠಿತ ಜುಹು ಪ್ರದೇಶದಲ್ಲಿ ಬೈಕ್‌ನಲ್ಲಿ ಬಂದಿದ್ದ ಮೂವರು ಶಸ್ತ್ರಸಜ್ಜಿತ ಕಿಡಿಗೇಡಿಗಳು ಬಾಲಿವುಡ್ ನಟ ಟೈಗರ್ ಶ್ರಾಫ್ ಅವರ ಕಾರಿನ ಮೇಲೆ ಗುಂಡು ಹಾರಿಸಿದ್ದಾರೆ ಎಂದು ವರದಿಯಾಗಿದೆ.ಟೈಗರ್ ಶ್ರಾಫ್ ಕಾ...

ಮೂವರಿಂದ ಶೂಟೌಟ್‌: ಬೆಚ್ಚಿಬೀಳಿಸುವಂತಿವೆ ಟೈಗರ್ ಶ್ರಾಫ್ ಮೇಲಿನ ದಾಳಿಯ ದೃಶ್ಯಗಳು
ಹಂಚಿಕೊಳ್ಳಿ:

ಮುಂಬೈನ ಜುಹು ಪ್ರದೇಶದ ಪುಷ್ಪ ಪಾರ್ಕ್ ಬಳಿ ಬೈಕ್‌ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಬಾಲಿವುಡ್ ನಟ ಟೈಗರ್ ಶ್ರಾಫ್ ಅವರ ಕಾರಿನ ಮೇಲೆ ನಾಲ್ಕು ಸುತ್ತು ಗುಂಡು ಹಾರಿಸಿದ್ದಾರೆ. ಈ ಘಟನೆಯಲ್ಲಿ ನಟನ ಚಾಲಕ ಫಿರ್ದೋಸ್ ಹಾಗೂ ಆಟೋ ಚಾಲಕನೊಬ್ಬ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ದಾಳಿಯ ಹೊಣೆಗಾರಿಕೆಯನ್ನು ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ ಹೊತ್ತುಕೊಂಡಿದೆ ಎಂದು ಹೇಳಲಾಗುತ್ತಿದ್ದು, ಪೊಲೀಸರು ಇದನ್ನು ಇನ್ನೂ ಖಚಿತಪಡಿಸಿಲ್ಲ. ಘಟನೆಯ ಬೆನ್ನಲ್ಲೇ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡಣವೀಸ್ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮದ ಭರವಸೆ ನೀಡಿದ್ದು, ಆರೋಪಿಗಳ ಪತ್ತೆಗೆ 15 ವಿಶೇಷ ಪೊಲೀಸ್ ತಂಡಗಳನ್ನು ರಚಿಸಲಾಗಿದೆ. ಉಪಮುಖ್ಯಮಂತ್ರಿ ಏಕನಾಥ ಶಿಂದೆ ಅವರು ಟೈಗರ್ ಶ್ರಾಫ್ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.

ಹಂಚಿಕೊಳ್ಳಿ: