ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಕರ್ನಾಟಕ

ಮುಂಬೈನಲ್ಲಿ ಇಂಡಿಯಾ ಮೈತ್ರಿಕೂಟವನ್ನು ರಾವಣನಿಗೆ ಹೋಲಿಸಿ ವಾಗ್ದಾಳಿ ನಡೆಸಿದ ಏಕನಾಥ ಶಿಂದೆ

ಮುಂಬೈ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ಕುರಿತಾದ ‘ಇಂಡಿಯಾ’ ಮೈತ್ರಿಕೂಟದ ನಾಯಕರ ನಿಲುವನ್ನು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಏಕನಾಥ ಶಿಂದೆ ಪ್ರಶ್ನಿಸಿದ್ದಾರೆ.ನಗರದಲ್ಲಿ ನಡೆದ ಪಕ್ಷದ ದಸರಾ ರ‍...

ಇಂಡಿಯಾ ಮೈತ್ರಿಕೂಟ 10 ತಲೆ ಇರುವ ರಾವಣನಿದ್ದಂತೆ; ಅದನ್ನು ದಹಿಸಬೇಕು –ಶಿಂದೆ
ಹಂಚಿಕೊಳ್ಳಿ:

ಮುಂಬೈನಲ್ಲಿ ನಡೆದ ದಸರಾ ರ‍್ಯಾಲಿಯಲ್ಲಿ ಮಾತನಾಡಿದ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಏಕನಾಥ ಶಿಂದೆ, ಇಂಡಿಯಾ ಮೈತ್ರಿಕೂಟವು ಹತ್ತು ತಲೆಗಳ ರಾವಣನಿದ್ದಂತೆ ಎಂದು ಲೇವಡಿ ಮಾಡಿದ್ದಾರೆ. 2019ರ ವಿಧಾನಸಭಾ ಚುನಾವಣೆ ಬಳಿಕ ಉದ್ಧವ್ ಠಾಕ್ರೆ ಅವರು ಜನಾದೇಶಕ್ಕೆ ವಿರುದ್ಧವಾಗಿ ಅಧಿಕಾರ ಹಿಡಿದಿದ್ದರು ಎಂದು ಆರೋಪಿಸಿದ ಅವರು, ವಿರೋಧ ಪಕ್ಷಗಳು ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿವೆ ಎಂದು ದೂರಿದರು. ಕಾಂಗ್ರೆಸ್ ಪಕ್ಷವು ದಶಕಗಳ ಕಾಲ ದೇಶವನ್ನು ಲೂಟಿ ಮಾಡಿದೆ ಎಂದು ಟೀಕಿಸಿದ ಶಿಂದೆ, ಸಂವಿಧಾನವನ್ನು ದುರ್ಬಲಗೊಳಿಸುವ ವಿರೋಧ ಪಕ್ಷಗಳ ಹುನ್ನಾರವನ್ನು ಜನರು ಅರ್ಥ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು.

ಹಂಚಿಕೊಳ್ಳಿ: