ಮುಂಬೈನಲ್ಲಿ ನಟ ಟೈಗರ್ ಶ್ರಾಫ್ ಮೇಲೆ ಗುಂಡಿನ ದಾಳಿ ನಡೆಸಿದ ಮೂವರು ಆರೋಪಿಗಳ ಬಂಧನ
ಮುಂಬೈ: ಬಾಲಿವುಡ್ ನಟ ಟೈಗರ್ ಶ್ರಾಫ್ ಅವರತ್ತ ಗುಂಡು ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಘಟನಾ ಸ್ಥಳದಲ್ಲಿ ಆರೋಪಿಗಳು ಬಿಟ್ಟುಹೋಗಿದ್ದ ಬೈಕ್ ಅವರ ಪತ್ತೆಗೆ ಪ್ರಮುಖ ಸ...

ಮುಂಬೈನ ಜುಹು ಪ್ರದೇಶದಲ್ಲಿ ನಟ ಟೈಗರ್ ಶ್ರಾಫ್ ಅವರ ಕಾರಿನ ಮೇಲೆ ಮೂರು ಸುತ್ತು ಗುಂಡಿನ ದಾಳಿ ನಡೆದಿದ್ದು, ಘಟನೆಯಲ್ಲಿ ಚಾಲಕ ಗಾಯಗೊಂಡಿದ್ದಾರೆ. ಆರೋಪಿಗಳು ಬಳಸಿದ್ದ ಬಜಾಜ್ ಪಲ್ಸರ್ 220 ಬೈಕ್ ಅಂಧೇರಿ ವೆಸ್ಟ್ ರೈಲ್ವೆ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಇದು ತನಿಖೆಗೆ ಪ್ರಮುಖ ಸುಳಿವಾಯಿತು. ಬಿಹಾರದ ಹೃತಿಕ್, ಹರಿಯಾಣದ ರೇಹಾನ್ ಮತ್ತು ಫೂಲ್ ಸಿಂಗ್ ಎಂಬುವರನ್ನು ರಾಜಸ್ಥಾನದ ಕೋಟಾ ರೈಲ್ವೆ ನಿಲ್ದಾಣದಲ್ಲಿ ಪೊಲೀಸರು ಸೆರೆಹಿಡಿದಿದ್ದಾರೆ. ದಾಳಿಯ ನಂತರ ಆರೋಪಿಗಳು ಪುಣೆ-ಜೈಪುರ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಪರಾರಿಯಾಗಿದ್ದರು. ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ ಈ ಕೃತ್ಯದ ಹೊಣೆ ಹೊತ್ತುಕೊಂಡಿದೆ ಎಂಬ ಮಾಹಿತಿಯನ್ನು ಪೊಲೀಸರು ಇನ್ನೂ ದೃಢಪಡಿಸಿಲ್ಲ.




