ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಕರ್ನಾಟಕ

ನವದೆಹಲಿ: ಹುತಾತ್ಮ ಪೊಲೀಸ್ ಸಿಬ್ಬಂದಿಗೆ ಪ್ರಧಾನಿ ಮೋದಿ ಗೌರವ ನಮನ

ನವದೆಹಲಿ: ಪೊಲೀಸ್ ಹುತಾತ್ಮರ ದಿನಾಚರಣೆ ಪ್ರಯುಕ್ತ ಕರ್ತವ್ಯದಲ್ಲಿರುವಾಗ ಪ್ರಾಣ ತ್ಯಾಗ ಮಾಡಿದ ಪೊಲೀಸ್ ಸಿಬ್ಬಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದ್ದಾರೆ. ಅತ್ಯಂತ ಸವಾಲಿನ ಪರಿಸ್ಥಿತಿಗಳಲ್ಲಿಯೂ ಬ...

Police Commemoration Day | ಪೊಲೀಸರ ಸೇವೆ, ತ್ಯಾಗ ಅನನ್ಯ: ಪ್ರಧಾನಿ ಮೋದಿ
ಹಂಚಿಕೊಳ್ಳಿ:

ಪೊಲೀಸ್ ಹುತಾತ್ಮರ ದಿನಾಚರಣೆಯ ಅಂಗವಾಗಿ ಕರ್ತವ್ಯದ ವೇಳೆ ಪ್ರಾಣಾರ್ಪಣೆ ಮಾಡಿದ ಸಿಬ್ಬಂದಿಯನ್ನು ಪ್ರಧಾನಿ ನರೇಂದ್ರ ಮೋದಿ ಸ್ಮರಿಸಿದ್ದಾರೆ. ಸಮಾಜದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಮತ್ತು ಜನರ ಭದ್ರತೆಗಾಗಿ ಪೊಲೀಸರು ತೋರುವ ಬದ್ಧತೆಯನ್ನು ಅವರು ಶ್ಲಾಘಿಸಿದ್ದಾರೆ. 1959ರ ಅಕ್ಟೋಬರ್ 21ರಂದು ಲಡಾಖ್‌ನ ಹಾಟ್ ಸ್ಪ್ರಿಂಗ್ ಪ್ರದೇಶದಲ್ಲಿ ಚೀನಾ ಪಡೆಗಳ ದಾಳಿಯಿಂದ ಮಡಿದ ಸಿಆರ್‌ಪಿಎಫ್ ಯೋಧರ ನೆನಪಿಗಾಗಿ ಈ ದಿನವನ್ನು ಆಚರಿಸಲಾಗುತ್ತದೆ. ಈ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಹುತಾತ್ಮರಿಗೆ ಪುಷ್ಪ ನಮನ ಸಲ್ಲಿಸಿ ಗೌರವ ವ್ಯಕ್ತಪಡಿಸಿದ್ದಾರೆ.

ಹಂಚಿಕೊಳ್ಳಿ: