ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಕರ್ನಾಟಕ

ನವದೆಹಲಿ: ಲೈಂಗಿಕ ಕಿರುಕುಳ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿದ ಸಂಸದ ಬಿಮೋಲ್

ನವದೆಹಲಿ: ಕಾಂಗ್ರೆಸ್ ಸಂಸದ ಹಾಗೂ ಜವಾಹರ್‌ಲಾಲ್ ನೆಹರೂ ವಿಶ್ವವಿದ್ಯಾಲಯದಿಂದ(ಜೆಎನ್‌ಯು) ವಜಾಗೊಂಡಿರುವ ಅಂಗೋಮ್ಚಾ ಬಿಮೋಲ್‌ ಅಕೋಯಿಜಮ್‌ ಅವರು ಲೈಂಗಿಕ ಕಿರುಕುಳ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಸ್ಥಳೀಯ ನ್ಯಾಯ...

ಲೈಂಗಿಕ ಕಿರುಕುಳ ಪ್ರಕರಣ:ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಕಾಂಗ್ರೆಸ್ ಸಂಸದ ಬಿಮೋಲ್
ಹಂಚಿಕೊಳ್ಳಿ:

ಜೆಎನ್‌ಯುನಲ್ಲಿ ಲೈಂಗಿಕ ಕಿರುಕುಳದ ಆರೋಪ ಎದುರಿಸುತ್ತಿರುವ ಸಂಸದ ಅಂಗೋಮ್ಚಾ ಬಿಮೋಲ್ ಅಕೋಯಿಜಮ್, ಬಂಧನದಿಂದ ತಪ್ಪಿಸಿಕೊಳ್ಳಲು ಸ್ಥಳೀಯ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯ ವಿಚಾರಣೆಯನ್ನು ನ್ಯಾಯಾಧೀಶ ವಿನಯ್ ಸಿಂಗ್ ನಡೆಸಲಿದ್ದಾರೆ. ಕಳೆದ ಮೇ ತಿಂಗಳಲ್ಲಿ 11 ವಿದ್ಯಾರ್ಥಿನಿಯರು ನೀಡಿದ ದೂರಿನ ಮೇರೆಗೆ, ವಸಂತ್ ಕುಂಜ್ ಪೊಲೀಸರು ಅಕ್ಟೋಬರ್ 12ರಂದು ಎಫ್‌ಐಆರ್ ದಾಖಲಿಸಿದ್ದರು. ಜೆಎನ್‌ಯು ಆಡಳಿತ ಮಂಡಳಿ ಇವರನ್ನು ಸೇವೆಯಿಂದ ವಜಾಗೊಳಿಸಿತ್ತಾದರೂ, ದೆಹಲಿ ಹೈಕೋರ್ಟ್ ಸೋಮವಾರ ಆ ವಜಾ ಆದೇಶಕ್ಕೆ ತಡೆ ನೀಡಿದೆ.

ಹಂಚಿಕೊಳ್ಳಿ: