ನವದೆಹಲಿ: ಶೃಂಗೇರಿ ಮತ ಎಣಿಕೆ ವಿಡಿಯೋ ಹಾಜರುಪಡಿಸಲು ಸುಪ್ರೀಂ ಕೋರ್ಟ್ ಸೂಚನೆ
ನವದೆಹಲಿ: ಶೃಂಗೇರಿ ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶದ ಮರುಮತ ಎಣಿಕೆ ಪ್ರಶ್ನಿಸಿ ಶಾಸಕ ರಾಜೇಗೌಡ ಸಲ್ಲಿಸಿರುವ ಅರ್ಜಿಯ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್, ಚುನಾವಣಾ ಆಯೋಗವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ....

ಶೃಂಗೇರಿ ವಿಧಾನಸಭಾ ಕ್ಷೇತ್ರದ 2023ರ ಚುನಾವಣಾ ಫಲಿತಾಂಶದ ಮರುಮತ ಎಣಿಕೆಗೆ ಸಂಬಂಧಿಸಿದ ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸಿದೆ. ಮೂಲ ಮತ ಎಣಿಕೆಯ ವಿಡಿಯೋವನ್ನು ನ್ಯಾಯಾಲಯಕ್ಕೆ ಒದಗಿಸುವಂತೆ ಆಯೋಗಕ್ಕೆ ನ್ಯಾಯಮೂರ್ತಿ ಸಂಜಯ್ ಕುಮಾರ್ ನೇತೃತ್ವದ ಪೀಠ ಕಟ್ಟುನಿಟ್ಟಿನ ಆದೇಶ ನೀಡಿದೆ. ಅಧಿಕಾರಿಗಳ ವರ್ಗಾವಣೆಯ ಕಾರಣ ನೀಡಿ ದಾಖಲೆ ನೀಡಲು ವಿಳಂಬ ಮಾಡುತ್ತಿರುವ ಆಯೋಗದ ಕ್ರಮಕ್ಕೆ ನ್ಯಾಯಪೀಠ ಅಸಮಾಧಾನ ವ್ಯಕ್ತಪಡಿಸಿದೆ. ವಿಡಿಯೋ ಹಾಜರುಪಡಿಸದಿದ್ದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿರುವ ನ್ಯಾಯಾಲಯ, ವಿಚಾರಣೆಯನ್ನು ಫೆಬ್ರವರಿ 15ಕ್ಕೆ ಮುಂದೂಡಿದೆ.




