ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಕರ್ನಾಟಕ

ನವದೆಹಲಿ: ಸಿಜೆಪಿ ನಾಯಕರಿಗೆ ವಿಚಾರಣೆಗೆ ಹಾಜರಾಗಲು ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ನವದೆಹಲಿ: ಜಂತರ್‌ ಮಂತರ್‌ಗೆ ಅತಿಕ್ರಮ ಪ್ರವೇಶ ಮಾಡಿದ ಪ್ರಕರಣ ಸಂಬಂಧ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ನಾಯಕರಾದ ಸೌರವ್ ದಾಸ್, ಅಶುತೋಷ್ ರಂಕಾ, ಅಜಿಂಕ್ಯ ಶಿಂದೆ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ದೆಹಲಿ ಪೊಲೀಸ್...

ಜೈಲಿನಿಂದ ಬಿಡುಗಡೆಯಾದ ಮರುದಿನವೇ CJP ನಾಯಕರಿಗೆ ಕ್ರೈಮ್ ಬ್ರಾಂಚ್‌ನಿಂದ ಸಮನ್ಸ್
ಹಂಚಿಕೊಳ್ಳಿ:

ಜಂತರ್ ಮಂತರ್‌ನಲ್ಲಿ ಅತಿಕ್ರಮ ಪ್ರವೇಶ ಮಾಡಿದ ಆರೋಪ ಎದುರಿಸುತ್ತಿರುವ ಕಾಕ್ರೋಚ್ ಜನತಾ ಪಾರ್ಟಿಯ ಸೌರವ್ ದಾಸ್, ಅಶುತೋಷ್ ರಂಕಾ ಮತ್ತು ಅಜಿಂಕ್ಯ ಶಿಂದೆ ಅವರಿಗೆ ದೆಹಲಿ ಪೊಲೀಸರ ಅಪರಾಧ ವಿಭಾಗ ನೋಟಿಸ್ ನೀಡಿದೆ. ಒಂದು ವಾರ ತಿಹಾರ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಈ ನಾಯಕರು ಬುಧವಾರವಷ್ಟೇ ಬಿಡುಗಡೆಗೊಂಡಿದ್ದರು. ಪ್ರಕರಣದ ತನಿಖೆಯನ್ನು ಅಪರಾಧ ವಿಭಾಗಕ್ಕೆ ವರ್ಗಾಯಿಸಲಾಗಿದ್ದು, ಈ ಮೂವರು ನಾಯಕರು ಗುರುವಾರ ಮಧ್ಯಾಹ್ನ 12 ಗಂಟೆಗೆ ರಾಜೌರಿ ಗಾರ್ಡನ್ ಕಚೇರಿಗೆ ವಿಚಾರಣೆಗೆ ಹಾಜರಾಗಬೇಕಿದೆ. ಕಳೆದ ಅಕ್ಟೋಬರ್ 13ರಂದು ನಿಷೇಧವಿದ್ದರೂ ಜಂತರ್ ಮಂತರ್ ಒಳಗೆ ನುಗ್ಗಿ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಇವರ ಮೇಲೆ ಕ್ರಮ ಕೈಗೊಳ್ಳಲಾಗಿದೆ.

ಹಂಚಿಕೊಳ್ಳಿ: